
ಕರ್ನಾಟಕ
ಕರಾವಳಿಯಲ್ಲಿ ಮುಂಗಾರು ಅಬ್ಬರ, ಬೆಂಗಳೂರಲ್ಲೂ ಭಾರಿ ಮಳೆಯಾಗುವ ಸಾಧ್ಯತೆ
ಬೆಂಗಳೂರು (ಜುಲೈ 9): ಕರ್ನಾಟಕದಲ್ಲಿ ದಕ್ಷಿಣ ಒಳನಾಡಿನಲ್ಲೂ ಮುಂಗಾರು ಚುರುಕಾಗಿದ್ದು ಜು.9ರಿಂದ 12ರವರೆಗೆ ಬೆಂಗಳೂರಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ನಗರದಲ್ಲಿ ಮಳೆ ಪ್ರಮಾಣ ಕಡಿಮೆ ಇದೆ. ಜೂ.1ರಿಂದ ಜು.8ರವರೆಗೆ ನಗರದಲ್ಲಿ ಕೇವಲ 92 ಮಿ.ಮೀ ಮಳೆಯಾಗಿದೆ. ವಾಡಿಕೆಗಿಂತ 20 ಮಿ.ಮೀ ಮಳೆ ಕಡಿಮೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಸುರಿಯುತ್ತಿರುವ ಮಳೆ ಬೆಂಗಳೂರಿನ ಮೇಲೂ ಪ್ರಭಾವ ಬೀರಲಿದೆ.
ಬೆಂಗಳೂರು ನಗರದಲ್ಲಿ ಗಡಿಷ್ಟ 26.3 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.7ಡಿಗ್ರಿ ಸೆಲ್ಸಿಯಸ್, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಗರಿಷ್ಠ 28.5 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.4ಡಿಗ್ರಿ ಸೆಲ್ಸಿಯಸ್, ಎಚ್ಎಎಲ್ನಲ್ಲಿ ಕನಿಷ್ಠ 26.7 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಇನ್ನೆರೆಡು ದಿನ ಬೆಂಗಳೂರಿನಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. (ಎನ್.ಬಿ)