ಸುದ್ದಿ ಸಂಕ್ಷಿಪ್ತ

ಉಚಿತ ಬೇಸಿಕ್ ಕಂಪ್ಯೂಟರ್ ತರಬೇತಿ

ಮಂಡ್ಯ (ಜುಲೈ 10): ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಡ್ಯ, ಇಲ್ಲಿ ಜುಲೈ 10 ರಿಂದ ಜುಲೈ 31 ರವರೆಗೆ ಕಚೇರಿ ವೇಳೆಯಲ್ಲಿ ಉಚಿತ ಬೇಸಿಕ್ ಕಂಪ್ಯೂಟರ್ ತರಬೇತಿಯನ್ನು ನೀಡಲಾಗುವುದು, ಕನಿಷ್ಠ ಎಸ್,ಎಸ್,ಎಲ್,ಸಿ ವಿದ್ಯಾರ್ಹತೆಯುಳ್ಳ ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ಅಂಕಪಟ್ಟಿ ಮತ್ತು ಅದರ ಪ್ರತಿ, ಆಧಾರ್ ಕಾರ್ಡ್ ಜೆರಾಕ್ಸ್ ಮತ್ತು ಇತ್ತೀಚಿನ 2 ಭಾವಚಿತ್ರಗಳೊಂದಿಗೆ ಉದ್ಯೋಗ ವಿನಿಮಯ ಕಚೇರಿಗೆ ಬಂದು ಹೆಸರು ನೊಂದಾಯಿಸಿಕೊಳ್ಳುವುದು ಹಾಗೂ ತರಬೇತಿಯಲ್ಲಿ ಭಾಗವಹಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಉದ್ಯೋಗ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ – 08232 220126 ಅನ್ನು ಸಂಪರ್ಕಿಸಬಹುದು. (ಎನ್.ಬಿ)

Leave a Reply

comments

Related Articles

Check Also

Close
error: