
ಮೈಸೂರು
ಮೈದುಂಬಿ ಹರಿಯುತ್ತಿದೆ ಚುಂಚನಕಟ್ಟೆ ಜಲಪಾತ
ಮೈಸೂರು,ಜು.11:- ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನಲ್ಲಿರುವ ಚುಂಚನಕಟ್ಟೆ ಜಲಪಾತ ಮೈದುಂಬಿ ಹರಿಯುತ್ತಿದೆ.
ಧನುಷ್ಕೋಟಿ ಜಲಪಾತ ಧುಮ್ಮಿಕ್ಕಿ ಹರಿದಿದ್ದು, ಧುಮ್ಮಿಕ್ಕುವ ಕಾವೇರಿಯನ್ನು ಕಂಡು ಪ್ರವಾಸಿಗರು ಪುಳಕಿತರಾಗಿದ್ದಾರೆ. ಕೊಡಗಿನಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಲಪಾತದ ಹರಿವು ಹೆಚ್ಚಿದೆ. ಚುಂಚನಕಟ್ಟೆ ಜಲಪಾತ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.ಜಲಪಾತ ನೋಡಲು ಪ್ರವಾಸಿಗರು ಮುಗಿಬಿದ್ದಿದ್ದಾರೆ. ಭದ್ರತಾ ಸಿಬ್ಬಂದಿಗಳು ಪ್ರವಾಸಿಗರನ್ನು ನಿಯಂತ್ರಿಸುತ್ತಿದ್ದಾರೆ. ಇತ್ತೀಚೆಗಷ್ಟೆ ವಿಜ್ಞಾನಿಯೋರ್ವರು ಜಲಪಾತದಲ್ಲಿ ಕೊಚ್ಚಿ ಹೋಗಿದ್ದರು. ಆ ನಂತರ ಜಲಪಾತದ ಒಳ ಆವರಣಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ ಮಾಡಲಾಗಿತ್ತು. (ಕೆ.ಎಸ್,ಎಸ್.ಎಚ್)