ಮೈಸೂರು

ದೇಶಪ್ರೇಮ, ರಾಷ್ಟ್ರ ನಿರ್ಮಾಣ ಕುರಿತ ರಾಷ್ಟ್ರಮಟ್ಟದ ಭಾಷಣ ಸ್ಪರ್ಧೆ

ಗಣರಾಜ್ಯೋತ್ಸವ ಅಂಗವಾಗಿ ಭಾರತ ಸರ್ಕಾರದ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಜಿಲ್ಲಾ ನೆಹರೂ ಯುವ ಕೇಂದ್ರ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ದೇಶಪ್ರೇಮ ಹಾಗೂ ರಾಷ್ಟ್ರ ನಿರ್ಮಾಣ ಕುರಿತ ರಾಷ್ಟ್ರಮಟ್ಟದ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಎಂ.ಎನ್. ನಟರಾಜ್ ತಿಳಿಸಿದರು.

ಗುರುವಾರ ವಾರ್ತಾಭವನದ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸ್ಪರ್ಧೆ ಹಿಂದಿ ಅಥವಾ ಇಂಗ್ಲಿಷ್ ಭಾಷೆಯಲ್ಲಿ ನಡೆಯಲಿದ್ದು, 18 ರಿಂದ 29ರ ವಯೋಮಾನದ ಯುವಕರು ಭಾಗವಹಿಸಬಹುದು. ಸ್ಪರ್ಧೆಯು ಜಿಲ್ಲಾಮಟ್ಟ, ರಾಜ್ಯಮಟ್ಟ ಹಾಗೂ ರಾಷ್ಟ್ರಮಟ್ಟದಲ್ಲಿ ನಡೆಯಲಿದ್ದು ಜಿಲ್ಲಾಮಟ್ಟದ ಪ್ರಥಮ ಬಹುಮಾನವಾಗಿ 5 ಸಾವಿರ, ದ್ವಿತೀಯ ಬಹುಮಾನ 2 ಸಾವಿರ ಹಾಗೂ ತೃತೀಯ ಬಹುಮಾನವಾಗಿ 1 ಸಾವಿರ ನೀಡಲಾಗುವುದು. ರಾಜ್ಯಮಟ್ಟದಲ್ಲಿ ಪ್ರಥಮ ಬಹುಮಾನ 25 ಸಾವಿರ, ದ್ವಿತೀಯ 10 ಸಾವಿರ ಹಾಗೂ ತೃತೀಯ ಬಹುಮಾನವಾಗಿ 5 ಸಾವಿರ ನೀಡಲಿದ್ದು, ರಾಷ್ಟ್ರ ಮಟ್ಟದಲ್ಲಿ ಪ್ರಥಮ ಬಹುಮಾನ 2 ಲಕ್ಷ, ದ್ವಿತೀಯ 1 ಲಕ್ಷ ಹಾಗೂ ತೃತೀಯ ಬಹುಮಾನವಾಗಿ 50 ಸಾವಿರ ರೂ. ನೀಡಲಾಗುವುದು ಎಂದು ಹೇಳಿದರು.

ಜಿಲ್ಲಾ ಮಟ್ಟದ ಸ್ಪರ್ಧೆ ಡಿ.23ರಂದು ಬೆಳಗ್ಗೆ 10 ಗಂಟೆಗೆ ಮಹಾರಾಣಿ ಕಾಲೇಜಿನ ಎ.ವಿ.ಹಾಲ್‌ನಲ್ಲಿ ನಡೆಯಲಿದ್ದು ಭಾಗವಹಿಸಲು ಇಚ್ಛಿಸುವವರು www.rjdcemys.in ನಲ್ಲಿ ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಡಿ.21ರೊಳಗೆ ಸಲ್ಲಿಸಬೇಕು. ಭಾಷಣ ಮಾಡಲು 8-10 ನಿಮಿಷ ಕಾಲಾವಕಾಶ ನಿಗದಿ ಮಾಡಿದ್ದು, ಸ್ಪರ್ಧೆಯಲ್ಲಿ ಭಾಗವಹಿಸುವವರು ಆಧಾರ್ ಕಾರ್ಡ್, ವೋಟರ್ ಐಡಿ ಹಾಗೂ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿಯನ್ನು ತರಬೇಕು ಎಂದು ತಿಳಿಸಿದರು.

ಹೆಚ್ಚಿನ ಮಾಹಿತಿಗೆ ದೂ.ಸಂ. 9449248068, 9844001442, 9448672866, 9483901750 ಅನ್ನು ಸಂಪರ್ಕಿಸಬಹುದು ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಪ್ರೊ.ರಘೋತ್ತಮ್, ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜಾನಾಧಿಕಾರಿ ಪ್ರೊ.ಬಿ.ಚಂದ್ರಶೇಖರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: