ದೇಶಪ್ರಮುಖ ಸುದ್ದಿ

ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇನ್ನು ಮುಂದೆ ಮದ್ಯ ಸಿಗಲ್ಲ

ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮದ್ಯದಂಗಡಿಗಳನ್ನು ನಿಷೇಧಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಕುಡಿದು ವಾಹನ ಚಲಾಯಿಸುವುದರಿಂದ ಅಪಘಾತಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟಲು ಈ ಆದೇಶ ಹೊರಡಿಸಿದೆ.

ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳಲ್ಲಿ 500 ಮೀಟರ್ ವ್ಯಾಪ್ತಿಯಲ್ಲಿ ಮದ್ಯದಂಗಡಿ ಇರಬಾರದು. ಈಗಾಗಲೇ ಇರುವ ಮದ್ಯದಂಗಡಿಗಳನ್ನು ಸ್ಥಳಾಂತರಿಸಿ, ಇದರ ಜೊತೆಗೆ ಹೆದ್ದಾರಿಗಳಲ್ಲಿರುವ ಜಾಹೀರಾತುಗಳನ್ನು ತೆರವುಗೊಳಿಸಬೇಕೆಂದು ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಠಾಕೂರ್ ಪೀಠ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಿದೆ.

ಈ ನಿಯಮವನ್ನು 2017ರ ಏಪ್ರಿಲ್ 1ರಿಂದ ಜಾರಿಗೊಳಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದ್ದು, ಮಾರ್ಚ್ 31ರ ನಂತರ ಬಾರ್ ಹಾಗೂ ಮದ್ಯದಂಗಡಿಗಳ ಲೈಸೆನ್ಸ್ ನವೀಕರಿಸದಂತೆ ಆದೇಶಿಸಿದೆ.

Leave a Reply

comments

Related Articles

error: