ಮೈಸೂರು

ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ

ಮೈಸೂರು,ಜು.11:- ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ  ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮೈಸೂರಿನ ಮೇಗಳಾಪುರ ಗ್ರಾಮದ ಬಳಿ ನಡೆದಿದೆ.

ಮೈಸೂರು ಟಿ. ನರಸೀಪುರ ರಸ್ತೆಯಲ್ಲಿರುವ ಮೇಗಳಾಪುರ ಗ್ರಾಮದ ಬಳಿ ಬರುತ್ತಿದ್ದಂತೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಗುದ್ದಿದೆ. ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದು, ಮತ್ತೋರ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು,ಮೇಗಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರಿನಲ್ಲಿರುವವರ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: