
ಪ್ರಮುಖ ಸುದ್ದಿಮೈಸೂರು
ಕಾವೇರಿ: ನಿತ್ಯ 2 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಆದೇಶ ಮುಂದುವರಿಕೆ
ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಪಟ್ಟಂತೆ ಗುರುವಾರದಂದು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆದಿದ್ದು, ಮಧ್ಯಂತರ ಆದೇಶವನ್ನು ಮುಂದುವರಿಸುವಂತೆ ಆದೇಶಿಸಿದೆ.
ತಮಿಳುನಾಡು, ಕರ್ನಾಟಕ, ಕೇರಳ ರಾಜ್ಯಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆಯನ್ನು ಜನವರಿ 4 ಕ್ಕೆ ಮುಂದೂಡಿದೆ. ಅಲ್ಲಿಯವರೆಗೆ ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಕರ್ನಾಟಕ ರಾಜ್ಯ ಸರಕಾರಕ್ಕೆ ಆದೇಶಿಸಿದೆ.