ಸುದ್ದಿ ಸಂಕ್ಷಿಪ್ತ

ಜುಲೈ 13ರಂದು ಹಾಸನ ಜಿಲ್ಲಾಧಿಕಾರಿ ತಾಲ್ಲೂಕು ಪ್ರವಾಸ

ಹಾಸನ (ಜುಲೈ 12): ಜಿಲ್ಲಾಧಿಕಾರಿಯವರು ಜು.13 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಅರಕಲಗೂಡು ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಪರಿಶೀಲನೆ ಮಾಡುವರು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿಂದಂತೆ ಸಾರ್ವಜನಿಕ ಕುಂದು ಕೊರತೆ ಪರಿಶೀಲನೆ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಮಧ್ಯಾಹ್ನ 3 ಗಂಟೆಗೆ ಅರಕಲಗೂಡು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವರು. (ಎನ್.ಬಿ)

Leave a Reply

comments

Related Articles

error: