ಸುದ್ದಿ ಸಂಕ್ಷಿಪ್ತ
ಕ್ಯಾಲೆಂಡರ್ ಬಿಡುಗಡೆ
ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕಂದಾಯ ಇಲಾಖಾ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತದಿಂದ ಡಿ.19ರ ಸೋಮವಾರ ಬೆಳಿಗ್ಗೆ 11ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಿ.ರಂದೀಪ್ 2017ರ ಕ್ಯಾಲೆಂಡರ್ ಬಿಡುಗಡೆಗೊಳಿಸುವರು ಎಂದು ಕಾರ್ಯಕಾರಿ ಸಮಿತಿ ಪರವಾಗಿ ಬಿ.ಸುಬ್ರಹ್ಮಣ್ಯರಾಜೇ ಅರಸ್ ತಿಳಿಸಿದ್ದಾರೆ.