ಮನರಂಜನೆ

ತಮ್ಮ ಪಾತ್ರಕ್ಕೆ ತಾವೇ ಡಬ್ಬಿಂಗ್ ಮಾಡಿದ ನಟ ಜಾನಿ ಲೀವರ್

ಬೆಂಗಳೂರು,ಜು.13-ಬಾಲಿವುಡ್ ನ ಖ್ಯಾತ ಹಾಸ್ಯ ನಟ ಜಾನಿ ಲೀವರ್ `ಗರ’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಇದೀಗ ಜಾನಿ ಲೀವರ್ ತಮ್ಮ ಪಾತ್ರಕ್ಕೆ ತಾವೇ ಡಬ್ಬಿಂಗ್ ಮೂಲಕ ಸುದ್ದಿಯಲ್ಲಿದ್ದಾರೆ.

ನಿರ್ದೇಶಕರು ನೀಡಿದ ಸಂಭಾಷಣೆಯನ್ನು ಅಭ್ಯಾಸ ಮಾಡಿ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಸತತ ಏಳು ಗಂಟೆಗಳ ಕಾಲ ತಮ್ಮ ಡಬ್ಬಿಂಗ್ ಮಾಡಿ ಮುಗಿಸಿದ್ದಾರೆ.

ಜಾನಿ ಲೀವರ್ ತಮ್ಮ ಪಾತ್ರಕ್ಕೆ ತಾವೇ ಡಬ್ಬಿಂಗ್ ಮಾಡಿರುವುದಕ್ಕೆ ನಿರ್ದೇಶಕ ಕೆ.ಆರ್.ಮುರಳಿಕೃಷ್ಣ ಹಾಗೂ ಚಿತ್ರತಂಡ ಸಂತಸ ವ್ಯಕ್ತಪಡಿಸಿದೆ.

ಕೆ.ಆರ್.ಮುರಳಿಕೃಷ್ಣ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವಗರಚಿತ್ರಕ್ಕೆ ಸಾಗರ್ ಗುರುರಾಜ್ ಸಂಗೀತ ನೀಡಿದ್ದಾರೆ. ಹೆಚ್.ಸಿ.ವೇಣು ಛಾಯಾಗ್ರಹಣ, ಉಮಾಶಂಕರ್ ಬಾಬು ಸಂಕಲನ, ದಿನೇಶ್ ಕಲಾ ನಿರ್ದೇಶನ ಹಾಗೂ ಬಾಲಿವುಡ್ ಖ್ಯಾತಿಯ ಸರೋಜ್ ಖಾನ್ ನೃತ್ಯ ನಿರ್ದೇಶನ ಚಿತ್ರಕ್ಕಿದೆ.

ಬಿಗ್ ಬಾಸ್ ಖ್ಯಾತಿಯ ರೆಹಮಾನ್, ಆವಂತಿಕ, ಆರ್ಯನ್, ಪ್ರಶಾಂತ್ ಸಿದ್ಧಿ, ರಾಮಕೃಷ್ಣ, ರೂಪಾದೇವಿ, ಮನದೀಪ್ ರಾಯ್, ತಬಲ ನಾಣಿ, ರೋಹಿತ್, ಸುನೇತ್ರ ಪಂಡಿತ್, ಸುಚಿತ್ರ, ನಿರಂಜನ್, ರಾಜೇಶ್ ರಾವ್, ಸೋನು, ದಯಾನಂದ್, ಗುರುರಾಜ್ ಕಲಾಲ್ ಬಂಡಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಮತ್ತೊಂದು ವಿಶೇಷ ಅಂದ್ರೆ, ಚಿತ್ರದಲ್ಲಿ ಜಾನಿಲೀವರ್ ಜೊತೆ ಸಾಧುಕೋಕಿಲ ಕೂಡ ಬಣ್ಣ ಹಚ್ಚಿದ್ದಾರೆ. ಸದ್ಯ, ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಆದಷ್ಟೂ ಬೇಗ ನಿಮ್ಮ ಮುಂದೆ ಬರುವ ಪ್ಲಾನ್ ಮಾಡಿದೆ. (ಎಂ.ಎನ್)

Leave a Reply

comments

Related Articles

error: