ಪ್ರಮುಖ ಸುದ್ದಿ

ವಿಶ್ವ ವಿದ್ಯಾನಿಲಯಗಳ ಸಿಂಡಿಕೇಟ್ ಸದಸ್ಯರನ್ನು ಬದಲಾವಣೆ ಮಾಡದಂತೆ ಸಿಎಂ ಹೆಚ್.ಡಿಕೆ ಅವರಿಗೆ ಸಿದ್ದರಾಮಯ್ಯ ಪತ್ರ

ಮೈಸೂರು,ಜು.14:- ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮಾಜಿ ಸಿಎಂ ಸಿದ್ದರಾಮಯ್ಯನವರ ಪತ್ರ ವ್ಯವಹಾರ ಜೋರಾಗಿದ್ದು, ಇದೀಗ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ.

ವಿಶ್ವ ವಿದ್ಯಾನಿಲಯಗಳ ಸಿಂಡಿಕೇಟ್ ಸದಸ್ಯರನ್ನು ಬದಲಾವಣೆ ಮಾಡದಂತೆ ಮನವಿ ಮಾಡಿ ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರಿಗೆ ಪತ್ರ ಬರೆದಿದ್ದಾರೆ.  ನಮ್ಮ ಸರ್ಕಾರದ ಅವಧಿಯಲ್ಲಿ  ಶೈಕ್ಷಣಿಕ ಕ್ಷೇತ್ರದಲ್ಲಿ ಪರಿಣಿತರಾದವರನ್ನು  ಸದಸ್ಯರನ್ನಾಗಿ ನೇಮಕ ಮಾಡಿದ್ದೇವೆ.  ಹೀಗಾಗಿ ಸಿಂಡಿಕೇಟ್ ಸದಸ್ಯರು ಹಾಗೂ ವ್ಯವಸ್ಥಾಪನಾ ಮಂಡಳಿ ಸದಸ್ಯರನ್ನು ಬದಲಾಯಿಸದಂತೆ  ಸಿಎಂ ಹೆಚ್.ಡಿ ಕುಮಾರಸ್ವಾಮಿಯವರಿಗೆ ಪತ್ರ ಬರೆದಿದ್ದಾರೆ.

ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದರೂ ಸಚಿವ ಜಿ.ಟಿ ದೇವೇಗೌಡರು ಮತ್ತು ಸಿದ್ದರಾಮಯ್ಯನವರ ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದೆ. ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಗೂ ಪತ್ರ ಬರೆಯಬೇಕಿದ್ದ ಸಿದ್ದರಾಮಯ್ಯ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ.

ಇತ್ತೀಚೆಗೆ ಬದಾಮಿ ಕ್ಷೇತ್ರದಲ್ಲಿ ಕೈಗಾರಿಕೆ ಸ್ಥಾಪನೆ ಮತ್ತು ಪ್ರವಾಸಿ ತಾಣಗಳ ಅಭಿವೃದ್ದಿ ಕುರಿತು ಸಿದ್ದರಾಮಯ್ಯ ಸಿಎಂ ಹೆಚ್.ಡಿಕೆಗೆ ಪತ್ರ ಬರೆದಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: