
ಮೈಸೂರು
ರೈತನ ಮೇಲೆ ಕರಡಿ ದಾಳಿ
ಬೆಳೆ ವೀಕ್ಷಣೆಗೆ ಜಮೀನಿಗೆ ತೆರಳಿದ ರೈತನ ಮೇಲೆ ಕರಡಿ ದಾಳಿ ನಡೆಸಿದ ಘಟನೆ ಶುಕ್ರವಾರ ವರದಿಯಾಗಿದೆ. ಎಚ್.ಡಿ.ಕೋಟೆ ತಾಲೋಕಿನ ಮೊಸರಳ್ಳ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಅಂಕನಾಯ್ಕ(65) ಕರಡಿ ದಾಳಿಯಿಂದ ಗಾಯಗೊಂಡ ರೈತ.
ಅವರ ಎರಡು ಕೈಗಳಿಗೆ ತೀವ್ರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಸರಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಎನ್.ಬೇಗೂರು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.