ಸುದ್ದಿ ಸಂಕ್ಷಿಪ್ತ

ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯವೇತನ, ಪುಸ್ತಕ ಅನುದಾನಕ್ಕಾಗಿ ಅರ್ಜಿ ಆಹ್ವಾನ

ಮಂಡ್ಯ (ಜುಲೈ 14): 2018-19ನೇ ಸಾಲಿಗಾಗಿ ಮೈಸೂರು, ಮಂಡ್ಯ ಜಿಲ್ಲಾ ವ್ಯಾಪ್ತಿಗೆ ಒಳಪಟ್ಟ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿಯವರೆಗೆ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಹಾಗೂ ಪಇಂಚಣಿ ಇಲ್ಲದ ಕರ್ನಾಟಕದ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರ ರಾಜ್ಯದ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಪುಸ್ತಕ ಅನುದಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಶುಲ್ಕರಹಿತ ಅರ್ಜಿಗಳನ್ನು ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮೈಸೂರು ಇವರಿಂದ ಗುರುತಿನ ಚೀಟಿ ಹಾಜರುಪಡಿಸಿ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನ.(ಎನ್.ಬಿ)

Leave a Reply

comments

Related Articles

error: