ಪ್ರಮುಖ ಸುದ್ದಿ

ದಿನೇಶ್ ಗುಂಡೂರಾವ್‍ಗೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಅಭಿನಂದನೆ

ರಾಜ್ಯ(ಮಡಿಕೇರಿ )ಜು.15 :- ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ದಿನೇಶ್ ಗುಂಡೂರಾವ್ ಅವರನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷರಾದ ಕೆ.ಎ.ಯಾಕುಬ್ ಬೆಂಗಳೂರಿನಲ್ಲಿ ಅಭಿನಂದಿಸಿದರು.

ಜಿಲ್ಲೆಯಲ್ಲಿ ಪಕ್ಷ ಸಂಘಟಿಸುವ ಕುರಿತು ಚರ್ಚಿಸಲಾಗಿದ್ದು, ಅಲ್ಪಸಂಖ್ಯಾತರ ಘಟಕದ ಬಲವರ್ಧನೆಯ ಬಗ್ಗೆ ದಿನೇಶ್ ಗುಂಡೂರಾವ್ ಅವರು ಭರವಸೆ ನೀಡಿದ್ದಾರೆ ಎಂದು ಯಾಕುಬ್ ತಿಳಿಸಿದ್ದಾರೆ.

ಈ  ಸಂದರ್ಭ ಡಿಸಿಸಿ ಅಲ್ಪಸಂಖ್ಯಾತರ ಘಟಕದ ಸದಸ್ಯ ಮಹಮ್ಮದ್ ಹನೀಫ್, ಪ್ರಮುಖರಾದ ವಿರಾಜಪೇಟೆಯ ಅಶ್ರಫ್, ನೌಶಾದ್ ಮತ್ತಿತರರು ಹಾಜರಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: