ಮೈಸೂರು

ತಡೆಗೋಡೆಗೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಶುಕ್ರವಾರ ಮುಂಜಾನೆ 4 ಗಂಟೆಯ ಸುಮಾರಿಗೆ ಬನ್ನೂರು ಕಡೆಯಿಂದ ಮೈಸೂರಿಗೆ ಬರುತ್ತಿದ್ದ ಕಾರು ರಘುನಾಥಪುರದಲ್ಲಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

5 ಮಂದಿ ಯುವಕರು ಕಾರಿನಲ್ಲಿ ಪ್ರಯಾಣಿಸುತ್ತಿದ್ದು, ಮುಂಜಾನೆ ವೇಳೆ ಕಾರಿನಲ್ಲಿ ಎಲ್ಲಿಗೆ ತೆರಳಿದ್ದರು ಎಂಬ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ. ಅಜಿತ್(22), ತೇಜಸ್(20), ಪುನಿತ್(24) ಸ್ಥಳದಲ್ಲೇ ಮೃತಪಟ್ಟಿದ್ದು, ಬನ್ನೂರು ಆಸ್ಪತ್ರೆಯಲ್ಲಿ ಶವಪರೀಕ್ಷೆ ನಡೆಸಲಾಗಿದೆ. ಆನಂದ್ ಮತ್ತು ಶಿವಕುಮಾರ್ ಅವರಿಗೆ ಗಾಯಗಳಾಗಿದ್ದು ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಯುವಕರು ಮೈಸೂರು ಮತ್ತು ಪಿರಿಯಾಪಟ್ಟಣದಲ್ಲಿ ವಾಸವಿದ್ದರು ಎನ್ನಲಾಗಿದೆ. ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

accident-2

Leave a Reply

comments

Related Articles

error: