ಮೈಸೂರು

ನಾಟಕೋತ್ಸವಕ್ಕೆ ಚಾಲನೆ

ಮೈಸೂರು ನಗರ ಜಿಲ್ಲಾ ಕಲಾವಿದರ ಕೇಂದ್ರ ಸಮಿತಿಯ ಏಳನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮೈಸೂರಿನ ರಂಗಾಚಾರ್ಲು ಪುರಭವನದಲ್ಲಿ ನಾಟಕೋತ್ಸವ ಹಾಗೂ ರಂಗವೈಭವಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜಕತ್ವದಲ್ಲಿ ನಡೆದ ಕಾರ್ಯಕ್ರಮವನ್ನು ಕಲಾವಿದರ ಕೇಂದ್ರ ಸಮಿತಿಯ ಅಧ್ಯಕ್ಷ ಬೋರೆಗೌಡ ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು 500ಮಂದಿ ಕಲಾವಿದರಿದ್ದಾರೆ. ಕಲಾವಿದರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಇಂಥಹ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಬಂದಂಥಹ ಹಣವನ್ನು ಬಡಕಲಾವಿದರ ಕುಟುಂಬಗಳಿಗೆ ನೀಡಲಾಗುವುದು ಎಂದರು.

ವೇದಿಕೆಯಲ್ಲಿ ಸಮಿತಿಯ ಕಾರ್ಯಾಧ್ಯಕ್ಷ ಹೊನ್ನಾನಾಯಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಶುಕ್ರವಾರ ಸಂಪೂರ್ಣ ರಾಮಾಯಣ ಪ್ರದರ್ಶನಗೊಂಡಿದ್ದು, ಶನಿವಾರ ದಕ್ಷಯಜ್ಞ ಪೌರಾಣಿಕ ನಾಟಕ ಪ್ರದರ್ಶನಗೊಳ್ಳಲಿದೆ.

Leave a Reply

comments

Related Articles

error: