
ಮೈಸೂರು
ಡಿ.25 : ಒಕ್ಕಲಿಗ ಕ್ಷೇಮಾಭಿವೃದ್ಧಿ ಸಂಘದ 6ನೇ ವಾರ್ಷಿಕೋತ್ಸವ
ಒಕ್ಕಲಿಗರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಡಿ.25 ರ ಬೆಳಿಗ್ಗೆ 10 ಗಂಟೆಗೆ ನಿಖಿತಾ-ಭೋಜೇಗೌಡ ಕಲ್ಯಾಣ ಮಂಟಪದಲ್ಲಿ 6 ನೇ ವಾರ್ಷಿಕೋತ್ಸವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಟಿ.ಆರ್.ಕೃಷ್ಣೇಗೌಡ ಹೇಳಿದರು.
ಶುಕ್ರವಾರ ಮೈಸೂರಿನ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಟಿ.ಆರ್.ಕೃಷ್ಣೇಗೌಡ ಮಾತನಾಡಿ ರಾಜ್ಯ ಖಜಾನೆ ಇಲಾಖೆಯ ನಿರ್ದೇಶಕಿ ಜ್ಯೋತಿ ಶ್ರೀಧರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಒಕ್ಕಲಿಗರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಟಿ.ಆರ್.ಕೃಷ್ಣೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ನಿವೃತ್ತ ಇಂಜಿನಿಯರ್ ಗೌಡೇಗೌಡ ಮತ್ತಿತರರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ನಿ.ಗಿರಿಗೌಡ ಒಕ್ಕಲಿಗರ ಕ್ಷೇಮಾಭಿವೃದ್ದಿ ಸಂಘದ 2017 ರ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿದರು. ಉಪಾಧ್ಯಕ್ಷ ಜಿ.ಜೆ. ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಕೆ.ಉದ್ದಂಡಗೌಡ, ಪ್ರವಾಸ ಕಾರ್ಯದರ್ಶಿ ಹೆಚ್. ರಾಜಣ್ಣ ಮತ್ತಿತರರು ಹಾಜರಿದ್ದರು.