ಪ್ರಮುಖ ಸುದ್ದಿಮೈಸೂರು

ಕಾಂಗ್ರೆಸ್ ಪಕ್ಷ ಅಧೋಗತಿಗೆ ಇಳಿದಿಲ್ಲ, ನಾಯಕರು ಅಧೋಗತಿಗೆ ಇಳಿದಿದ್ದಾರೆ: ಎಚ್.ವಿಶ್ವನಾಥ್

ಸಚಿವರಾಗಿದ್ದ ಎಚ್.ವೈ. ಮೇಟಿ ರಾಸಲೀಲೆ ಪ್ರಕರಣ ಸಂಬಂಧ ಕ್ರಮ ಕೈಗೊಳ್ಳುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಳಂಬ ಧೋರಣೆ ಅನುಸರಿಸಿದ್ದಾರೆ. ಸಿದ್ದರಾಮಯ್ಯ ಅವರಿಗೆ ನಾನು ಯಾವುದೇ  ರೀತಿಯ ಸಲಹೆ ನೀಡುವುದಿಲ್ಲ ಎಂದು ಮಾಜಿ ಸಂಸದ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಎಚ್.ವಿಶ್ವನಾಥ್ ಹೇಳಿದರು.

ಮೈಸೂರಿನಲ್ಲಿ ಖಾಸಗಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಪರಮೇಶ್ವರ್ ಅವರು ಯಾವುದಾದರೂ ಒಂದು ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಪಕ್ಷದ ಅಧ್ಯಕ್ಷ ಸ್ಥಾನ ಮುಖ್ಯಮಂತ್ರಿ ಸ್ಥಾನಕ್ಕಿಂತ ಮಿಗಿಲಾದುದು. ಪಕ್ಷದ ಹಿತದೃಷ್ಟಿಯಿಂದ ಪರಮೇಶ್ವರ್ ಯಾವುದಾದರೂ ಒಂದು ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಕಾಂಗ್ರೆಸ್ ಪಕ್ಷಕ್ಕೇ ತನ್ನದೇ ಆದ ಇತಿಹಾಸವಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧೋಗತಿಗೆ ಇಳಿದಿಲ್ಲ.  ಬದಲಿಗೆ ಪಕ್ಷದಲ್ಲಿರುವ ನಾಯಕರು ಅಧೋಗತಿಗೆ ಇಳಿದಿದ್ದಾರೆ ಎಂದು ಹರಿಹಾಯ್ದರು.

ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ: ನೋಟುಗಳನ್ನು ನಿಷೇಧಿಸಿದ ಕೇಂದ್ರದ ನಿರ್ಧಾರದಿಂದಾಗಿ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಕಂಡಿದೆ. ಸಂಸತನ್ನು ಎದುರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಫಲರಾಗಿದ್ದಾರೆಂದು ದೂರಿದರು. ಸಂಸತ್ ಅಧಿವೇಶನದಲ್ಲಿ ಸುಗಮ ಕಲಾಪಕ್ಕೆ ಅನುವು ಮಾಡಿಕೊಡುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸ್ವತಃ ಬಿಜೆಪಿ ಹಿರಿಯ ಮುಖಂಡ ಎಲ್.ಕೆ. ಅಡ್ವಾಣಿಯವರೇ ಈ ಬಗ್ಗೆ ಬೇಸರಗೊಂಡು ಅಸಮಾಧಾನ ವ್ಯಕ್ತಪಡಿಸಿದ್ದು, ರಾಜೀನಾಮೆ ನೀಡುವುದಾಗಿಯೂ ತಿಳಿಸಿದ್ದಾರೆ ಎಂದು ಹೇಳಿದರು.

Leave a Reply

comments

Related Articles

error: