ಮೈಸೂರು

ಜು.19- 20 : ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಪ್ರವಾಸ

ಮೈಸೂರು, ಜು.18: – ಸಣ್ಣ ಮತ್ತು ನೀರಾವರಿ ಸಚಿವರಾದ ಸಿ.ಎಸ್. ಪುಟ್ಟರಾಜು ಅವರು ಜುಲೈ 19 ಹಾಗೂ 20 ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಜುಲೈ 19 ರಂದು ಮಧ್ಯಾಹ್ನ 2.15 ಕ್ಕೆ  ಪಿರಿಯಾಪಟ್ಟಣ ತಾಲೂಕು ಕ್ರೀಡಾಂಗಣ ಹೆಲಿಪ್ಯಾಡ್‍ಗೆ ಆಗಮಿಸಿದ ನಂತರ ರಸ್ತೆ ಮೂಲಕ ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಡಿಕೇರಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಜುಲೈ 20 ರಂದು ಬೆಳಿಗ್ಗೆ 9 ಗಂಟೆಗೆ ಪಿರಿಯಾಪಟ್ಟಣ ತಾಲೂಕು ಕ್ರೀಡಾಂಗಣ ಹೆಲಿಪ್ಯಾಡ್‍ಗೆ ಆಗಮಿಸಿ ನಂತರ ಬೆಳಿಗ್ಗೆ 9-30 ಗಂಟೆಗೆ ಹೆಲಿಕಾಪ್ಟರ್ ಮೂಲಕ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಬೆಳಿಗ್ಗೆ 9.50 ಕ್ಕೆ  ಚಾಮುಂಡಿಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ಮಾತೆ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12 ಗಂಟೆಗೆ  ಮುಖ್ಯಮಂತ್ರಿಯವರೊಂದಿಗೆ ಮೈಸೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ 12.20 ಕ್ಕೆ ಹೆಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಧ್ಯಾಹ್ನ 1.30 ಗಂಟೆಗೆ ಹೆಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯ ಹೆಲಿಪ್ಯಾಡ್‍ನಿಂದ ಹೆಲಿಕಾಪ್ಟರ್ ಮೂಲಕ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್. ಹೆಲಿಪ್ಯಾಡ್‍ಗೆ ತೆರಳಲಿದ್ದಾರೆ. (ಕೆ.ಎಸ್,ಎಸ್.ಎಚ್).

Leave a Reply

comments

Related Articles

error: