ಕರ್ನಾಟಕ

ನ್ಯಾಯಾಂಗ ಸೇವೆಯ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಹಾಸನ (ಜುಲೈ 19): ಹಾಸನ ಜಿಲ್ಲೆಗೆ ಸೇರಿದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ ಬೌದ್ಧ ಮತ್ತು ಪಾರ್ಸಿ ಸಮುದಾಯದ ಅಭ್ಯರ್ಥಿಗಳಿಗೆ ಕಾನೂನು ಪದವೀಧರರಿಗೆ ವಕೀಲ ವೃತ್ತಿಯಲ್ಲಿ ಮತ್ತು ನ್ಯಾಯಾಂಗ ಸೇವೆಯ ಪೂರ್ವ ತರಬೇತಿ ಪಡೆಯಲು, ಈ ಕೆಳಕಂಡ ನಿಬಂಧನೆಗಳಿಗೆ ಒಳಪಟ್ಟಂತೆ ಇಚ್ಛೆಯುಳ್ಳ ಅರ್ಹ ಅಭ್ಯರ್ಥಿಗಳಿಂದ 2018-19ನೇ ಸಾಲಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಬಂಧನೆಗಳು: 

ಕಾನೂನು ಪದವಿ (ಎಲ್.ಎಲ್.ಬಿ) ಪಾಸು ಮಾಡಿದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದ ಅಭ್ಯರ್ಥಿಯಾಗಿರಬೇಕು. ಪ್ರಸಕ್ತ ಸಾಲಿನಲ್ಲಿ ತರಬೇತಿ ಭತ್ಯೆಗೆ ಜಿಲ್ಲೆಯಿಂದ 2 ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು.

ಅಭ್ಯರ್ಥಿಗಳ ಪೋಷಕರ ವಾರ್ಷಿಕ ವರಮಾನ ರೂ. 3,50,000 ಲಕ್ಷಗಳಿಗಿಂತ ಕಡಿಮೆ ಇರಬೇಕು. ತರಬೇತಿಯ ಅವಧಿ 4 ವರ್ಷಗಳು ಮಾತ್ರ, ತರಬೇತಿಯ ಅವಧಿಯಲ್ಲಿ ಮಾಹೆಯಾನ ರೂ. 4000 (ರೂ ನಾಲ್ಕು ಸಾವಿರ ಮಾತ್ರ) ತರಬೇತಿ ಭತ್ಯೆ ನೀಡಲಾಗುವುದು. ಈ ಸೌಲಭ್ಯ ಪಡೆಯಲಿಚ್ಛಿಸುವ ಅಭ್ಯರ್ಥಿಗಳ ವಯೋಮಿತಿ 30 ವರ್ಷಗಳು ಮೀರಿರಬಾರದು.

ಅಭ್ಯರ್ಥಿಯು ಬಾರ್ ಕೌನ್ಸಿಲ್‍ನಲ್ಲಿ ಹೆಸರು ನೊಂದಾಯಿಸಿರತಕ್ಕದ್ದು, ಮತ್ತು ದಾಖಲೆಗಳನ್ನು ಒದಗಿಸುವುದು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಸರ್ಕಾರಿ ಅಭೀಯೋಜಕರು, ಸರ್ಕಾರಿ ವಕೀಲರು ಅಥವಾ 20 ವರ್ಷ ವಕೀಲ ವೃತ್ತಿಯುಲ್ಲಿ ಅನುಭವವುಳ್ಳ ವಕೀಲರ ಹತ್ತಿರ ತರಬೇತಿಗೆ ನಿಯೋಜಿಸಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳು ಸುಳ್ಳು ಆದಾಯ, ಜಾತಿ ಪ್ರಮಾಣ ಪತ್ರವನ್ನು ನೀಡಿ ಆಯ್ಕೆಯಾಗಿರುವುದು ಕಂಡುಬಂದಲ್ಲಿ ಶಿಕ್ಷೆಗೆ ಗುರಿಪಡಿಸಿ, ತರಬೇತಿ ಭತ್ಯೆ ನೀಡುವ ಒಟ್ಟು ಹಣದ ಜೊತೆಗೆ ಶೇ.10 ರಷ್ಟು ಬಡ್ಡಿ ಸೇರಿಸಿ ಭೂ ಕಂದಾಯ ಬಾಕಿ ರೂಪದಲ್ಲಿ ವಸೂಲು ಮಾಡಲಾಗುವುದು.

ಈ ಹಿಂದೆ ಯಾವುದೇ ಇಲಾಖೆಯಲ್ಲಿ ತರಬೇತಿ ಭತ್ಯೆ ಸೌಲಭ್ಯವನ್ನು ಪಡೆದಿರಬಾರದು. ಅರ್ಜಿ ಸ್ವೀಕರಿಸುವ ಕಡೆ ದಿನಾಂಕಕ್ಕೆ ಕಾನೂನು ಪದವಿ ಮುಗಿಸಿ 2 ವರ್ಷಗಳಾಗಿರಬೇಕು. ನಿಗದಿತ ಅರ್ಜಿ ನಮೂನೆಯನ್ನು ಈ ಕಚೇರಿಯಿಂದ ಉಚಿತವಾಗಿ ಪಡೆಯಬಹುದಾಗಿದೆ.

ಅಭ್ಯರ್ಥಿಯು ಭರ್ತಿ ಮಾಡಿದ ಅರ್ಜಿಗಳನ್ನು ಸದಸ್ಯ ಕಾರ್ಯದರ್ಶಿಗಳು, ಕಾನೂನು ಪದವೀಧರರ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಹಾಗೂ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಆಕಾಶವಾಣಿ ಹಿಂಭಾಗ, ಸಾಲಗಾಮೆ ಮುಖ್ಯ ರಸ್ತೆ, ಹಾಸನ-573202 ಇವರಿಗೆ ದಿನಾಂಕ: 01-08-2018ರ ಅಪರಾಹ್ನ 5.30 ಒಳಗೆ ಸಲ್ಲಿಸುವುದು. ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: