ಮೈಸೂರು

ಎವಿಎಸ್ಎಸ್ ವತಿಯಿಂದ ಪರಿಶಿಷ್ಟ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ .22.

ಮೈಸೂರು,ಜು.19 : ಅಂಬೇಡ್ಕರ್ ವಿವಿದ್ದೋದ್ದೇಶ ಸೇವಾ ಸಂಸ್ಥೆ, ಸಹಕಾರ ಸಂಘ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ, ದೀಕ್ಷಾ ಯಾತ್ರೆಗೆ ನೊಂದಣಿ, ಸಂಸ್ಥೆಯ ವೆಬ್ ಸೈಟ್ ಗೆ ಹಾಗೂ ಸಂಘದ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎವಿಎಸ್ಎಸ್ ಸಂಸ್ಥಾಪಕ ಅಧ್ಯಕ್ಷ ತುಂಬಲ ರಾಮಣ್ಣ ತಿಳಿಸಿದರು.

ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜು.22ರ ಬೆಳಗ್ಗೆ 10 ಗಂಟೆಗೆ ಕಲಾಮಂದಿರದಲ್ಲಿ ನಡೆಯುವ ಕಾರ್ಯಕ್ರಮವನ್ನು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಉದ್ಘಾಟಿಸುವರು. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಎನ್.ಮಹೇಶ್ ಅಧ್ಯಕ್ಷತೆ ವಹಿಸುವರು, ಹಿಂದುಳಿದ ವರ್ಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಪ್ರತಿಭಾ ಪುರಸ್ಕಾರ ನೆರವೇರಿಸುವರು ಎಂದು ತಿಳಿಸಿದರು.

ಸಹಕಾರ ಸಂಘದ ಸದಸ್ಯತ್ವ ಅಭಿಯಾನಕ್ಕೆ ಸಂಸದ ದೃವನಾರಾಯಣ ಹಾಗೂ ಸಂಸ್ಥೆಯ ಅಂತರ್ಜಾಲಕ್ಕೆ ಶಾಸಕ ಸತೀಶ್ ಜಾರಕಿಹೊಳಿ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಸಚಿವ ನರೇಂದ್ರಸ್ವಾಮಿ, ಚಾಮರಾಜನಗರ ಜಿ.ಪಂ. ಅಧ್ಯಕ್ಷೆ ಶಿವಮ್ಮ ಕೃಷ್ಣ, ಮಾಜಿ ಅಧ್ಯಕ್ಷ ಪುಷ್ಪಾ ಅಮರ್ ನಾಥ್, ಜಿ.ಪಂ, ತಾ.ಪಂ ಸದಸ್ಯರು ಹಾಗೂ ಇತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಹೇಳಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಎಸ್.ಎಸ್.ಎಲ್.ಸಿ ಮತ್ತು ಪಿಯು ಯಲ್ಲಿ ಶೇ.85ರಷ್ಟು ಅಂಕ ಪಡೆದ 500 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸುತ್ತಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಗೂ 1 ಸಾವಿರ ರೂ.ನಗದು, ಪ್ರಶಸ್ತಿ ಫಲಕ, ಫಲಪುಷ್ಪ ನೀಡಿ ಸನ್ಮಾನಿಸಲಾಗುವುದು.

ಇದೇ ಸಂದರ್ಭದಲ್ಲಿ ನಾಗಪುರದ ದೀಕ್ಷಾ ಭೂಮಿ ಯಾತ್ರೆಯ ನೋಂದಾಣಿಯು ನಡೆಯಲಿದ್ದು ಆಸಕ್ತರು 1900 ರೂಗಳನ್ನು ನೀಡಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಮನವಿ ಮಾಡಿದರು.

ಪದಾಧಿಕಾರಿಗಳಾದ ಎನ್.ನಾಗಯ್ಯ, ಗಿರೀಶ್ ಮಾಚಳ್ಳಿ, ಪ್ರಕಾಶ್, ಸೋಮರಾಜು, ಮನೋಹರ್ ಗೋಷ್ಠಿಯಲ್ಲಿ ಇದ್ದರು. (ವರದಿ : ಕೆ.ಎಂ.ಆರ್)

Leave a Reply

comments

Related Articles

error: