ಮೈಸೂರು

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಸಾಲಬಾಧೆ ತಾಳಲಾರದೇ ವ್ಯಕ್ತಿಯೋರ್ವರು ನೇಣಿಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ನಡೆದಿದೆ.

ಮೃತನನ್ನು ಎಚ್.ಡಿ.ಕೋಟೆ ತಾಲೂಕಿನ ಆನಗಟ್ಟಿ ಗ್ರಾಮದ ನಿವಾಸಿ ರವಿಕುಮಾರ್ ಎಂದು ಗುರುತಿಸಲಾಗಿದೆ. ತನ್ನ ಜಮೀನಿನಲ್ಲಿರುವ ಮರಕ್ಕೆ ಈತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಲ ಮಾಡಿಕೊಂಡಿದ್ದು, ಸಾಲ ಮರುಪಾವತಿಸಲಾಗದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ. ಶುಕ್ರವಾರ ಮನೆಯಿಂದ ಕಾಣೆಯಾಗಿದ್ದ ರವಿಕುಮಾರ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ.

ಬೀಚನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Leave a Reply

comments

Related Articles

error: