ಕರ್ನಾಟಕಪ್ರಮುಖ ಸುದ್ದಿ

ಶಿರೂರು ಶ್ರೀಗಳ ನಿಧನಕ್ಕೆ ಸಚಿವ ದೇಶಪಾಂಡೆ ಸಂತಾಪ

ಬೆಂಗಳೂರು (ಜುಲೈ 20): ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಮುಖ್ಯಸ್ಥರಾಗಿದ್ದ ಶ್ರೀ ಲಕ್ಷ್ಮೀವರತೀರ್ಥ ಶ್ರೀಗಳ ನಿಧನಕ್ಕೆ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಕಂಬನಿ ಮಿಡಿದಿದ್ದಾರೆ.

ಆಧ್ಯಾತ್ಮಿಕ ಸಾಧನೆಯ ಜೊತೆಗೆ ಸಾಮಾಜಿಕ ಕಳಕಳಿಯನ್ನು ಹೊಂದಿದ್ದ ಶ್ರೀಗಳು, ಸಮಕಾಲೀನ ಸಮಾಜದ ಆಗುಹೋಗುಗಳಿಗೂ ಸ್ಪಂದಿಸುತ್ತಿದ್ದರು. ಅವರ ಅಕಾಲಿಕ ನಿಧನದಿಂದಾಗಿ ಭಕ್ತರು ಸಮರ್ಥ ಮಾರ್ಗದರ್ಶಕರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಸಚಿವರು ತಮ್ಮ ಶೋಕಸಂದೇಶದಲ್ಲಿ ದುಃಖಿಸಿದ್ದಾರೆ.

ಶ್ರೀಲಕ್ಷೀವರತೀರ್ಥರು ತಮ್ಮ ಸಾಂಸ್ಕೃತಿಕ ಆಸಕ್ತಿಯಿಂದಲೂ ಗಮನ ಸೆಳೆದಿದ್ದರು. ಚಿಕ್ಕ ವಯಸ್ಸಿನಲ್ಲೇ ಯತಿಗಳಾದ ಅವರು ಪರಂಪರೆ ಮತ್ತು ಆಧುನಿಕತೆಯ ಸಮನ್ವಯದಂತಿದ್ದರು ಎಂದು ಆರ್.ವಿ.ದೇಶಪಾಂಡೆ ನೆನಪಿಸಿಕೊಂಡಿದ್ದಾರೆ.

ಶ್ರೀಗಳ ನಿಧನದಿಂದ ಉಂಟಾಗಿರುವ ದುಃಖವನ್ನು ಭರಿಸಿಕೊಳ್ಳುವ ಶಕ್ತಿಯನ್ನು ಭಗವಂತನು ಅವರ ಭಕ್ತರಿಗೆ ದಯಪಾಲಿಸಲಿ ಎಂದು ಅವರು ಸಂತಾಪ ಸಂದೇಶದಲ್ಲಿ ಹೇಳಿದ್ದಾರೆ. (ಎನ್.ಬಿ)

Leave a Reply

comments

Related Articles

error: