ಮೈಸೂರು

ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ

ಮೈಸೂರು,ಜು.21:-  ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಆಗ್ರಹಿಸಿ ರಾಜ್ಯಾದ್ಯಂತ ಕ್ಯಾಂಪಸ್  ಫ್ರಂಟ್ ಆಫ್ ಇಂಡಿಯಾ ಹಮ್ಮಿಕೊಂಡಿದ್ದ ಪ್ರತಿಭಟನೆಯ ಅಂಗವಾಗಿ ನಗರದ ಬಸ್ ನಿಲ್ದಾಣದ ಹತ್ತಿರದಲ್ಲಿರುವ ಟೌನ್ ಹಾಲಿನ ಮುಂಭಾಗ ಕ್ಯಾಂಪಸ್ ಫ್ರಂಟ್ ಮೈಸೂರು ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

ನಿನ್ನೆ ಸಾಯಂಕಾಲ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಕ್ಯಾಂಪಸ್ ಫ್ರಂಟ್ ಮೈಸೂರು ಜಿಲ್ಲಾ ಕಾರ್ಯದರ್ಶಿ ತನ್ವೀಜ್ ಅಹಮದ್ ವಿದ್ಯಾರ್ಥಿಗಳು ತಮ್ಮ ದೇಶದ ಭವಿಷ್ಯವನ್ನು ರೂಪಿಸುವವರಾಗಿರುತ್ತಾರೆ. ಅಂತಹ ವಿದ್ಯಾರ್ಥಿಗಳಿಗೆ ರಾಜಕೀಯ ವ್ಯಕ್ತಿಗಳು ಯಾವುದೇ ಅನುಕೂಲವನ್ನು ಮಾಡಿಕೊಡದೆ ಕೇವಲ  ಹೇಳಿಕೆ ನೀಡುವ ಮೂಲಕ ವಿದ್ಯಾರ್ಥಿಗಳನ್ನು ಕಡೆಗಣಿಸುತ್ತಿರುವುದು ಖಂಡನೀಯವಾಗಿದೆ. ಶೀಘ್ರವಾಗಿ ಉಚಿತ ಬಸ್ ಪಾಸ್ ಜಾರಿಯಾಗದಿದ್ದಲ್ಲಿ ಇನ್ನೂ ಉಗ್ರವಾದ ಹೋರಾಟ ಮುಂದುವರೆಯುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಮೈಸೂರು ಜಿಲ್ಲಾ ಸಮಿತಿ ಸದಸ್ಯರಾದ ದಾವುದ್, ಸಗೀರ್, ಅಫ್ತಾಬ್, ಜಿಲ್ಲಾ ಸಮಿತಿ ಸದಸ್ಯರಾದ ಅಫ್ತಾಬ್ ಮತ್ತಿತರರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: