ಮೈಸೂರು

ಸರ್ಕಾರದ ವತಿಯಿಂದ ಹಂತ ಹಂತವಾಗಿ ಸೌಲಭ್ಯ ಒದಗಿಸಿಕೊಡಲು ಕ್ರಮ : ಶಾಸಕ ಎಲ್.ನಾಗೇಂದ್ರ

ಮೈಸೂರು,ಜು.21-ಶಾಸಕ ಎಲ್.ನಾಗೇಂದ್ರ ನೇತೃತ್ವದಲ್ಲಿ ಶನಿವಾರ ನಗರದ ಮಹಾರಾಣಿ ವಿಜ್ಞಾನ ಕಾಲೇಜು ಆವರಣದಲ್ಲಿ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗಿತ್ತು.

ಎಲ್.ನಾಗೇಂದ್ರ ಅವರೊಂದಿಗೆ ನಗರಪಾಲಿಕೆ ಆಯುಕ್ತ ಜಗದೀಶ್, ಆರೋಗ್ಯ ಇಲಾಖೆ ಅಧಿಕಾರಿ ನಾಗರಾಜು, ಯಾದವ್, ಕಾಲೇಜು ಪ್ರಾಂಶುಪಾಲರು, ಕಾಲೇಜು ವಿದ್ಯಾರ್ಥಿನಿಯರು ಸೇರಿದಂತೆ ಅನೇಕರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರು ಕಾಲೇಜಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಲೇಜಿನಲ್ಲಿ ಶೌಚಾಲಯದ ಸಮ್ಯಸೆಯಿದೆ. ಅಲ್ಲದೆ, ಕೊಠಡಿಗಳು, ಲ್ಯಾಬ್ ಗಳ ಕೊರತೆಯಿದೆ. ಕಾಲೇಜು ಆವರಣದಲ್ಲಿ ಸ್ವಚ್ಛತೆ ಇಲ್ಲ ಎಂದು ವಿದ್ಯಾರ್ಥಿಗಳು ದೂರು ನೀಡಿದ್ದರು.

ಹೀಗಾಗಿ ಇಂದು ಕಾಲೇಜು ಆವರಣದಲ್ಲಿ ಮೊದಲಿಗೆ ಸ್ವಚ್ಛತಾ ಕಾರ್ಯವನ್ನು ಕೈಗೊಂಡಿದ್ದೇವೆ. ಗಿಡಗಂಟಿಗಳನ್ನು ಕಿತ್ತುಹಾಕಿ ಬೆಂಚ್ ಗಳನ್ನು ಹಾಕಿಸಿಕೊಡಲು ವ್ಯವಸ್ಥೆ ಮಾಡಲಾಗುತ್ತಿದೆ. ಸರ್ಕಾರದ ವತಿಯಿಂದ ಹಂತ ಹಂತವಾಗಿ ಇ-ಶೌಚಾಲಯ ವ್ಯವಸ್ಥೆ, ಕೊಠಡಿಗಳು, ಲ್ಯಾಬ್ ಗಳ ಸೌಲಭ್ಯ ಒದಗಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು ಎಂದರು. (ಎಚ್.ಎನ್, ಎಂ.ಎನ್)

Leave a Reply

comments

Related Articles

error: