ಕರ್ನಾಟಕ

ಆಟೋ ರಿಕ್ಷಾ ಗೆ ಬಸ್ ಡಿಕ್ಕಿ: 6 ವಿದ್ಯಾರ್ಥಿಗಳು ಸೇರಿ 7 ಮಂದಿಗೆ ಗಾಯ

ಕೊಣಾಜೆ,ಜು.21-ಆಟೋ ರಿಕ್ಷಾಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಇರಾ ಸಮೀಪದ ಮೂಳೂರು ಎಂಬಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.

ಮುಡಿಪುವಿನಿಂದ ಇರಾ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಇರಾ ಕಡೆಯಿಂದ ಮುಡಿಪು ಕಡೆಗೆ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ರಿಕ್ಷಾಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆಟೋ ರಿಕ್ಷಾದಲ್ಲಿದ್ದ ಆರು ಮಂದಿ ವಿದ್ಯಾರ್ಥಿಗಳು ಹಾಗೂ ರಿಕ್ಷಾ ಚಾಲಕ ಗಾಯಗೊಂಡಿದ್ದಾನೆ.

ಗಾಯಾಳುಗಳನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಎಂ.ಎನ್)

Leave a Reply

comments

Related Articles

error: