ದೇಶ

ರಕ್ಷಣೆ ಕೋರಿ ಕೇಂದ್ರ ಸಚಿವರ ಭೇಟಿಯಾದ ಆರ್‍ಟಿಐ ಕಾರ್ಯಕರ್ತ ರಾಜಶೇಖರ್‍

ಅಬಕಾರಿ ಸಚಿವರಾಗಿದ್ದ ಎಚ್.ವೈ.ಮೇಟಿ ರಾಸಲೀಲೆ ಸಿಡಿಯನ್ನು ಬಿಡುಗಡೆಗೊಳಿಸಿದ್ದ ಬಳ್ಳಾರಿಯ ಆರ್‍ಟಿಐ ಕಾರ್ಯಕರ್ತ ರಾಜಶೇಖರ್ ಮಲಾಲಿ ಶನಿವಾರ ಬೆಳಗ್ಗೆ ಕೇಂದ್ರ ಗೃಹ ಸಚಿವ ರಾಜ್‍ನಾಥ್ ಸಿಂಗ್ ಅವರನ್ನು ಭೇಟಿಯಾಗಿ ರಕ್ಷಣೆ ನೀಡುವಂತೆ ಕೇಳಿಕೊಂಡಿದ್ದಾರೆ.

ನವದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಸಚಿವ ರಾಜ್‍ನಾಥ್ ಸಿಂಗ್ ನಿವಾಸಕ್ಕೆ ಭೇಟಿ ನೀಡಿದ ರಾಜಶೇಖರ್ ಕರ್ನಾಟಕದಲ್ಲಿ ನನಗೆ ಜೀವ ಬೆದರಿಕೆ ಇದೆ. ಹಾಗಾಗಿ ಸೂಕ್ತ ರಕ್ಷಣೆ ನೀಡುವಂತೆ ಕರ್ನಾಟಕ ರಾಜ್ಯ ಸರಕಾರಕ್ಕೆ ಸೂಚಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಸರಕಾರಿ ಕೆಲಸದಲ್ಲಿರುವ ಮಹಿಳೆಯೊಬ್ಬರಿಗೆ ಸ್ಥಳನಿಯುಕ್ತಿ (ಪೋಸ್ಟಿಂಗ್) ಕೊಡಿಸುವ ನೆಪದಲ್ಲಿ ಹಿರಿಯ ಸಚಿವ ಮೇಟಿ ಅವರು ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎನ್ನಲಾದ ವಿಡಿಯೋ ಸಿ.ಡಿ ಅನ್ನು ರಾಜಶೇಖರ್ ಅವರು ಕಳೆದ ಬುಧವಾರದಂದು ಬಿಡುಗಡೆಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಮೇಟಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Leave a Reply

comments

Related Articles

error: