ಸುದ್ದಿ ಸಂಕ್ಷಿಪ್ತ

ಜು.22 ರಂದು 24 ರವರೆಗೆ ಮೈಸೂರಿನಲ್ಲಿ ಕೆ.ಜೆ.ಚಾರ್ಜ್ ಪ್ರವಾಸ ಕಾರ್ಯಕ್ರಮ

ಮೈಸೂರು,ಜು.21-ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಕ್ಕರೆ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಕೆ.ಜೆ.ಜಾರ್ಜ್ ಅವರು ಜು.22 ರಿಂದ 24 ರವರೆಗೆ ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಜು.22 ರಂದು ಸಂಜೆ 6 ಗಂಟೆಗೆ ಮೈಸೂರಿಗೆ ಆಗಮಿಸಿ ನಂತರ ಮೈಸೂರಿನಲ್ಲಿ ವಾಸ್ತವ್ಯ ಹೂಡುವರು. ಜು.23 ರಂದು ಬೆಳಿಗ್ಗೆ 9.30 ಗಂಟೆಗೆ ಮೈಸೂರಿನಿಂದ ರಸ್ತೆ ಮೂಲಕ ಚಾಮರಾಜನಗರಕ್ಕೆ ಪ್ರಯಾಣ ಮಾಡುವರು. ಮಧ್ಯಾಹ್ನ 3.30 ಕ್ಕೆ ಮೈಸೂರಿಗೆ ಆಗಮಿಸಿ ಮೈಸೂರಿನಲ್ಲಿ ವಾಸ್ತವ್ಯ  ಹೂಡುವರು.

ಜು.24 ರಂದು 10 ಗಂಟೆಗೆ ಕಡಕೊಳ, ಅಡಕನಹಳ್ಳಿ, ತಾಂಡ್ಯ, ಕಲ್ಲಹಳ್ಳಿ ಕೋಚನಹಳ್ಳಿ, ಹಿಮ್ಮಾವು ಮತ್ತು ಕಲ್ಲಹಳ್ಳಿ ಕೈಗಾರಿಕಾ ಪ್ರದೇಶಗಳಿಗೆ ಭೇಟಿ ನೀಡುವರು. ಬೆಳಿಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಉನ್ನತ ಶಿಕ್ಷಣ ಸಚಿವರೊಂದಿಗೆ ಫಾಲ್ಕನ್ ಟೈರ್ಸ್ ಸಂಸ್ಥೆಯ ನೌಕರರ ಯೂನಿಯನ್ ಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಫಾಲ್ಕನ್ ಟೈರ್ಸ್ ಕಾರ್ಖಾನೆ ಪುನರಾರಂಭಿಸುವ ಕುರಿತಂತೆ ಸಭೆಯಲ್ಲಿ ಭಾಗವಹಿಸುವರು.

ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮೈಸೂರು ಜಿಲ್ಲೆಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಭಾಗವಹಿಸುವರು.

ಮಧ್ಯಾಹ್ನ 12.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮೈಸೂರು ಕೈಗಾರಿಕಾ ಅಸೋಷಿಯೇಷನ್ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 1 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸುವರು.

ಮಧ್ಯಾಹ್ನ 2.30ಕ್ಕೆ ಜಿಲ್ಲಾ ಕಾಂಗ್ರೆಸ್ ಪಕ್ಷ ಕಚೇರಿ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಗೆ ಭೇಟಿ ಮತ್ತು ಪಕ್ಷದ ಮುಖಂಡರು ಮತ್ತು ಪದಾಧಿಕಾರಿಗಳೊಂದಿಗೆ ಚರ್ಚೆಯಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 3 ಗಂಟೆಗೆ ಮೈಸೂರಿನಿಂದ ಮಂಡ್ಯ ಜಿಲ್ಲೆಗೆ ರಸ್ತೆಯ ಮೂಲಕ ತೆರಳುವರು. (ಎಂ.ಎನ್)

Leave a Reply

comments

Related Articles

error: