ಸುದ್ದಿ ಸಂಕ್ಷಿಪ್ತ
ಸಂಘದ ಹುದ್ದೆಗಳಿಗೆ ಆಯ್ಕೆ
ಕರ್ನಾಟಕ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘ, ಮೈಸೂರು ಜಿಲ್ಲೆ ಸಂಘದ ತಾಲೂಕು ಮತ್ತು ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯು ರಾಜ್ಯಾಧ್ಯಕ್ಷರಾದ ಕೃಷ್ಣಪ್ಪನವರ ಮಾರ್ಗದರ್ಶನದಲ್ಲಿ ಹಾಗೂ ಜಿಲ್ಲಾ ಸಂಘದ ಗೌರವಾಧ್ಯಕ್ಷರಾದ ದೊಡ್ಡಯ್ಯನವರ ಅಧ್ಯಕ್ಷತೆಯಲ್ಲಿ ನಡೆದು ಸಂಘದ ನೂತನ ಮೈಸೂರು ಜಿಲ್ಲಾಧ್ಯಕ್ಷರಾದಿ ಡಿ. ಚಂದ್ರಮೋಹನ್, ಪ್ರಧಾನ ಕಾರ್ಯದರ್ಶಿಯಾಗಿ ಬಿ. ದೊಡ್ಡಯ್ಯ, ವಿಭಾಗೀಯ ಕಾರ್ಯದರ್ಶಿಯಾಗಿ ದುಂಡಯ್ಯ ಮತ್ತು ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮಲ್ಲಿಕಾರ್ಜುನಸ್ವಾಮಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷ ಡಿ. ಚಂದ್ರಮೋಹನ್ ತಿಳಿಸಿದ್ದಾರೆ.