ಮೈಸೂರು

ಡಿ.20 : 529ನೇ ಕನಕ ಜಯಂತ್ಯೋತ್ಸವ

ಕನಕ ಯುವ ವೇದಿಕೆ ಸಂಯುಕ್ತಾಶ್ರಯದಲ್ಲಿ ಡಿ.20 ರಂದು 529 ನೇ ಕನಕ ಜಯಂತೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ಶಿವರಾಮು ತಿಳಿಸಿದರು.

ಮೈಸೂರಿನ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಶಿವರಾಮು ಮಾತನಾಡಿ ಅಂದು ಮಧ್ಯಾಹ್ನ1.30 ಕ್ಕೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಿಂದ ಶಿವಾಜಿ ಮುಖ್ಯ ರಸ್ತೆಯವರೆಗೆ ಮೆರವಣಿಗೆ ಇರುತ್ತದೆ. ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಮೆರವಣಿಗೆಯಲ್ಲಿ ಕನಕದಾಸರ ಪ್ರತಿಮೆಯನ್ನೊಳಗೊಂಡಂತೆ, ವಿವಿಧ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ಸಾಗುತ್ತದೆ ಎಂದರು.

ಅದೇ ದಿನ ಸಂಜೆ 5 ಗಂಟೆಗೆ ಕಾಗಿನೆಲೆ ಕನಕಗುರುಪೀಠದ ಶಿವಾನಂದಪುರಿ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಸಮಾರಂಭ ಆರಂಭವಾಗಲಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.  ಪಾಲಿಕೆ ಸದಸ್ಯ ಬಿ.ಎಂ.ನಟರಾಜು ಅಧ‍್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಪ್ರತಾಪ್ ಸಿಂಹ, ಶಾಸಕ ಎಂ.ಕೆ.ಸೋಮಶೇಖರ್ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಿರಿಯರನ್ನು ಸನ್ಮಾನಿಸಲಾಗುವುದು. ಸಂಜೆ 4 ಗಂಟೆಗೆ ರಸಮಂಜರಿ ಕಾರ್ಯಕ್ರಮವಿರುತ್ತದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಪದಾಧಿಕಾರಿಗಳಾದ ಪುಟ್ಟರಾಜು, ಸುನಿಲ್, ಚಂದ್ರಣ್ಣ, ಮಂಜುನಾಥ್ ಹಾಜರಿದ್ದರು.

Leave a Reply

comments

Related Articles

error: