ಮೈಸೂರು

ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದ ಬಸ್ : 20ಕ್ಕೂ ಅಧಿಕ ಮಂದಿಗೆ ಗಾಯ

ಮೈಸೂರು,ಜು.24:- ನಿಯ್ರಂತಣ ಕಳೆದುಕೊಂಡ ಬಸ್ಸೊಂದು ಮಗುಚಿ ಬಿದ್ದ ಪರಿಣಾಮ 20 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಯಡದೊರೆ ಬಳಿ ನಡೆದಿದೆ.

ಮೈಸೂರಿನಿಂದ ಒಡೆಯರ ಪಾಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಯಡದೊರೆ ಬಳಿ ನಿಯಂತ್ರಣ ಕಳೆದುಕೊಂಡು ಜಮೀ‌ನಿಗೆ ಉರುಳಿ  ಬಿದ್ದಿದೆ. ಬಸ್ಸಿನಲ್ಲಿ 50 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದು ಈ ಪೈಕಿ 20 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ತಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ತಿ.ನರಸೀಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: