ಮೈಸೂರು

ಕೆ.ಆರ್.ಆಸ್ಪತ್ರೆ ನರ್ಸಿಂಗ್ ವಿದ್ಯಾರ್ಥಿನಿ ನಿಲಯಕ್ಕೆ ಭದ್ರತೆ ಒದಗಿಸುವಂತೆ ಆಗ್ರಹಿಸಿ ಪ್ರತಿಭಟನೆ

ಮೈಸೂರು,ಜು.24:- ಕೆ.ಆರ್.ಆಸ್ಪತ್ರೆ ನರ್ಸಿಂಗ್ ವಿದ್ಯಾರ್ಥಿನಿ ನಿಲಯಕ್ಕೆ ಭದ್ರತೆ ಒದಗಿಸುವಂತೆ ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಯಿತು.

ಮೈಸೂರು ಜಿಲ್ಲಾಧಿಕಾರಿಗಳ ಕಛೇರಿ ಎದುರಿಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಕೆ.ಆರ್.ಆಸ್ಪತ್ರೆಯ ಆವರಣದಲ್ಲಿರುವ ನರ್ಸಿಂಗ್ ವಿದ್ಯಾರ್ಥಿನಿ ನಿಲಯಕ್ಕೆ ಕಾಂಪೌಂಡ್ ಏರಿಸಬೇಕು. ವಿದ್ಯಾರ್ಥಿನಿಯರ ಶೈಕ್ಷಣಿಕ ವಾತಾವರಣಕ್ಕೆ ಪೂರಕವಾಗುವ ರೀತಿಯಲ್ಲಿ ನೆಮ್ಮದಿ ಭದ್ರತೆಯನ್ನು ಕಲ್ಪಿಸಿ ಎಂದು ಒತ್ತಾಯಿಸಿದರು. ಕಳೆದ ನಾಲ್ಕು ದಿನಗಳಿಂದ ಆಗಂತುಕ ವ್ಯಕ್ತಿಯೋರ್ವ ಹಾಸ್ಟೇಲ್ ಗೆ ನುಗ್ಗಿ ವಿಕೃತ ರೀತಿಯಲ್ಲಿ ವರ್ತಿಸುತ್ತಿದ್ದು ವಿದ್ಯಾರ್ಥಿನಿಯರನ್ನು ಆತಂಕಕ್ಕೀಡು ಮಾಡಿದೆ. ಸುಮಾರು ನೂರ ಅರವತ್ತು ವಿದ್ಯಾರ್ಥಿನಿಯರು ವಾಸವಾಗಿದ್ದು, ದೂರದ ಊರುಗಳಿಂದ ಹಳ್ಳಿಗಳಿಂದ ನರ್ಸಿಂಗ್ ವಿದ್ಯಾಭ್ಯಾಸಕ್ಕಾಗಿ ಬಂದಿರುತ್ತಾರೆ. ಅವರ ಸಮಸ್ಯೆಗಳನ್ನು ಬಗೆಹರಿಸಿ ಸೂಕ್ತ ಭದ್ರತೆಯನ್ನು ಒದಗಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಸಮಿತಿಯ ಸಂಧ್ಯಾ ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: