ಸುದ್ದಿ ಸಂಕ್ಷಿಪ್ತ

ನಾಳೆ ಡೆಂಗ್ಯೂ ಜಾಗೃತಿ ಜಾಥಾ

ಮೈಸೂರು,ಜು.24 : ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ ವತಿಯಿಂದ ಡೆಂಗ್ಯೂ ವಿರೋಧಿ ಮಾಸಾಚರಣೆಯ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ.

ಕುವೆಂಪುನಗರದ ಪ್ರಾ.ಆ.ಕೇಂದ್ರದಲ್ಲಿ ನಾಳೆ (25)ರ ಬೆಳಗ್ಗೆ 10 ಗಂಟೆಗೆ ಪಾಲಿಕೆ ಸದಸ್ಯರಾದ ಕೆ.ವಿ.ಮಲ್ಲೇಶ್, ಕೆಂಪಣ್ಣ, ಎಂ.ಬಿ.ಜಗದೀಶ್, ಎಂ.ಕೆ.ಶಂಕರ್, ಸೀಮಾ ಪ್ರಸಾದ್ ಜಾಥಾಕ್ಕೆ ಹಸಿರು ನಿಶಾನೆ ತೋರುವರು ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: