ಸುದ್ದಿ ಸಂಕ್ಷಿಪ್ತ
ತರಬೇತಿ ಕಾರ್ಯಾಗಾರ
ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಮೈಸೂರು ವಿಭಾಗ ಮಟ್ಟದ ಭೌತಶಾಸ್ತ್ರ ಉಪನ್ಯಾಸಕರ ವಿಷಯಾಧರಿತ ತರಬೇತಿ ಕಾರ್ಯಾಗಾರದ ಉದ್ಘಾಟನಾ ಸಮಾರಂಭ ಶ್ರೀ ಕ್ಷೇತ್ರ ಸುತ್ತೂರಿನಲ್ಲಿ ಡಿ.19ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಸುತ್ತೂರಿನ ಆಡಳಿತಾಧಿಕಾರಿ ಉದಯ ಶಂಕರ್ ಅಧ್ಯಕ್ಷತೆ ವಹಿಸಲಿದ್ದು, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಯಪ್ರಕಾಶ್ ಉದ್ಘಾಟಿಸಲಿದ್ದಾರೆ.