ಸುದ್ದಿ ಸಂಕ್ಷಿಪ್ತ
ಉಚಿತ ನೇತ್ರ ಶಿಬಿರ
ಅಶೋಕಪುರಂನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇತ್ತೀಚಿಗೆ ಶಂಕರ್ ಕಣ್ಣಿನ ಆಸ್ಪತ್ರೆ ಬೆಂಗಳೂರು, ಧಾನ್ ಫೌಂಡೇಶನ್ ಮೈಸೂರು ಮತ್ತು ವಿನಾಯಕ ಕ್ರೀಡಾ ಹಾಗೂ ಸಮಾಜ ಸೇವಾ ಸಂಸ್ಥೆ ಅಶೋಕಪುರಂ ಸಹಯೋಗದೊಂದಿಗೆ ‘ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರ’ವನ್ನು ಹಮ್ಮಿಕೊಳ್ಳಲಾಗಿತ್ತು. ಮಾಜಿ ಮೇಯರ್ ಪುರುಷೋತ್ತಮ್, ಆಂದೋಲನ ಪತ್ರಿಕೆಯ ಸಂಪಾದಕರಾದ ರಾಜಶೇಖರ ಕೋಟಿಯವರು ಮತ್ತು ವಿನಾಯಕ ಕ್ರೀಡಾ ಹಾಗೂ ಸಮಾಜ ಸೇವಾ ಸಂಸ್ಥೆಯ ಅಧ್ಯಕ್ಷರಾದ ಆನಂದಮೂರ್ತಿಯವರು ಉದ್ಘಾಟಿಸಿದರು.
ಸುಮಾರು 220 ಜನರಿಗೆ ಹೊರರೋಗಿಗಳಾಗಿ ಚಿಕಿತ್ಸೆ ನೀಡಲಾಗಿದೆ. 50 ಜನರಿಗೆ ಕಣ್ಣಿನ ಶಸ್ತ್ರಚಿಕಿತ್ಸೆಗಾಗಿ ಬೆಂಗಳೂರಿನ ಶಂಕರ್ ಕಣ್ಣಿನ ಆಸ್ಪತ್ರೆಗೆ ಕಳುಹಿಸಲಾಗಿದೆ.