ಮೈಸೂರು

ಹೊಯ್ಸಳ ಪ್ರಶಸ್ತಿ ಪ್ರದಾನ

hoysala-2ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಹೊಯ್ಸಳ ಕರ್ನಾಟಕ ಸಂಘ ಸಭಾಂಗಣದಲ್ಲಿ ಹೊಯ್ಸಳ ಕನ್ನಡ ಸಂಘ ಮತ್ತು ಸವಿಗನ್ನಡ ಪತ್ರಿಕಾ ಬಳಗ ಕನ್ನಡ ಯೋಧ ನಾ.ಲಿಂಗಸ್ವಾಮಿ ವೇದಿಕೆ ವತಿಯಿಂದ 61ನೇ ಕನ್ನಡ ರಾಜ್ಯೋತ್ಸವ, 17ನೇ ವಾರ್ಷಿಕೋತ್ಸವ ಮತ್ತು ಹೊಯ್ಸಳ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಕವಯಿತ್ರಿ ಡಾ.ಲತಾ ರಾಜಶೇಖರ್ ಉದ್ಘಾಟಿಸಿದರು. ವೇದಿಕೆಯಲ್ಲಿ ವಂಗೀಪುರ ನಂಬೀಮಠದ ಇಳೈ ಆಳ್ವಾರ್ ಸ್ವಾಮೀಜಿ, ಹಿರಿಯ ಭಾಷಾ ತಜ್ಞ ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರೀ, ಜೆ.ಎಸ್.ಎಸ್.ಮಹಾವಿದ್ಯಾಪೀಠದ ಪ್ರಸರಣಾ ವಿಭಾಗದ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ, ಹೊಯ್ಸಳ ಕನ್ನಡ ಸಂಘದ ಗೌರವಾಧ್ಯಕ್ಷಬಿ.ಪಿ.ಅಶ್ವತ್ಥ ನಾರಾಯಣ, ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ ಡಾ.ಹೆಚ್.ಬಿರಾಜಶೇಖರ್, ಹೊಯ್ಸಳ ಕನ್ನಡ ಸಂಘದ ಅಧ್ಯಕ್ಷ ಪಿ.ವಿ.ಭಾರದ್ವಾಜ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: