ಕರ್ನಾಟಕ

ಪ್ರವಾಸಿ ಟ್ಯಾಕ್ಸಿ ಖರೀದಿಸಲು ಸಹಾಯಧನ : ಅರ್ಜಿ ಆಹ್ವಾನ

ಮಂಡ್ಯ (ಜುಲೈ 28): 2018-19ನೇ ಸಾಲಿನಲ್ಲಿ ಮಂಡ್ಯ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗದಲ್ಲಿ ಲಘು ವಾಹನ ಚಾಲನಾ ಪರವಾನಗಿ ಮತ್ತು ಬ್ಯಾಡ್ಜ್ ಹೊಂದಿರುವ 13 ಅರ್ಹ ನಿರುದ್ಯೋಗಿ ವಿದ್ಯಾವಂತ ಅಭ್ಯರ್ಥಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಹಾಗೂ ಪ್ರವಾಸಿ ತಾಣಗಳಿಗೆ ಪ್ರವಾಸಿಗರನ್ನು ಕರೆದುಕೊಂಡು ಹೋಗಲು ಪ್ರವಾಸಿ ಟ್ಯಾಕ್ಸಿ ಖರೀದಿಸಲು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಪ್ರವಾಸಿ ಟ್ಯಾಕ್ಸಿಗಳಿಗೆ ತಗಲುವ ಒಟ್ಟು ವೆಚ್ಚದಲ್ಲಿ ರೂ.3.00 ಲಕ್ಷಗಳನ್ನು ಪ್ರವಾಸೋದ್ಯಮ ಇಲಾಖೆಯಿಂದ ಸಹಾಯಧನ ರೂಪದಲ್ಲಿ ನೀಡಲಾಗುವುದು. ವಾಹನದ ಒಟ್ಟು ವೆಚ್ಚದಲ್ಲಿ ಶೇ.5 ರಷ್ಟನ್ನು ಫಲಾನುಭವಿಗಳು ಭರಿಸಬೇಕಾಗಿರುತ್ತದೆ. ಉಳಿದ ಹಣವನ್ನು ರಾಷ್ಟ್ರೀಕೃತ/ ವಾಣಿಜ್ಯ ಬ್ಯಾಂಕ್ ಮೂಲಕ ಸಾಲದಲ್ಲಿ ಭರಿಸಬೇಕಾಗುತ್ತದೆ.

ಅರ್ಜಿಗಳನ್ನು ಉಪ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, ಮಂಡ್ಯ ಇಲ್ಲಿ ಆಗಸ್ಟ್ 1 ರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ 31 ರೊಳಗೆ ಉಪನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಮಂಡ್ಯ ಇವರಿಗೆ ಸಲ್ಲಿಸಬೇಕು.

ಇತರೆ ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಮಂಡ್ಯ ಅಥವಾ ದೂರವಾಣಿ ಸಂಖ್ಯೆ:08232-238377 ಅನ್ನು ಸಂಪರ್ಕಿಸಬಹುದು. (ಎನ್.ಬಿ)

Leave a Reply

comments

Related Articles

error: