ಮೈಸೂರು

ಸಾವಿನಲ್ಲೂ ಒಂದಾದ ತಾಯಿ ಮಗ

ಮೈಸೂರು,ಜು.30:- ಸಾವಿನಲ್ಲೂ ತಾಯಿ ಮಗ ಇಬ್ಬರೂ ಒಂದಾದ ಘಟನೆ ಮೈಸೂರಿನ ಅಗ್ರಹಾರದಲ್ಲಿ ನಡೆದಿದೆ.

ಅಗ್ರಹಾರದ ನಿವಾಸಿ ಶಾಂತಮ್ಮಣ್ಣಿ (72) ಅವರ ದಿಲೀಪ್ (49) ಅನಾರೋಗ್ಯದಿಂದ ಬಳಲುತ್ತಿದ್ದರು. ತಾಯಿಗೆ ಕಿಡ್ನಿಗೆ ಸಂಬಂಧಿಸಿದಂತೆ ಸಮಸ್ಯೆಯಿತ್ತು. ಮಗನಿಗೆ ಹೃದಯಸಂಬಂಧಿ ಸಮಸ್ಯೆಯಿತ್ತು. ಇಂದು ಬೆಳಿಗ್ಗೆ 6 ಗಂಟೆಗೆ ಮಗ ಸಾವನ್ನಪ್ಪಿದ್ದು, ಮಗನ ಸಾವಿನ ಸುದ್ದಿ ಕೇಳಿದ ಬಳಿಕ ತಾಯಿಯೂ ಸಾವನ್ನಪ್ಪಿದ್ದಾರೆ.ಇಬ್ಬರ ಅಂತ್ಯಕ್ರಿಯೆಯನ್ನು ಒಟ್ಟಿಗೆ ನಡೆಸಲು ತೀರ್ಮಾನಿಸಲಾಗಿದೆ ಎನ್ನಲಾಗಿದ್ದು,ವಿದ್ಯಾರಣ್ಯಪುರಂನ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎನ್ನಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: