
ಪ್ರಮುಖ ಸುದ್ದಿ
ಆ.7: ದೇಶಾದ್ಯಂತ ಸಾರಿಗೆ ಮುಷ್ಕರಕ್ಕೆ ಕರೆ
ರಾಜ್ಯ(ಬೆಂಗಳೂರು)ಜು.31:- ಆಗಸ್ಟ್ ಏಳನೇ ತಾರೀಕಿನಂದು ಕೆಎಸ್ಸಾರ್ಟಿಸಿ ಸ್ಟಾಫ್ ಆಂಡ್ ವರ್ಕರ್ಸ್ ಅಸೋಸಿಯೇಶನ್ ದೇಶಾದ್ಯಂತ ಸಾರಿಗೆ ಮುಷ್ಕರಕ್ಕೆ ಕರೆ ನೀಡಿದೆ.
ಸರಕಾರಿ ಕೆಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಖಾಸಗಿ ಬಸ್ ಗಳು ಕೂಡಾ ರಸ್ತೆಗಿಳಿಯದೇ ಮುಷ್ಕರಕ್ಕೆ ಬೆಂಬಲ ನೀಡಲಿದೆ ಎಂದು ತಿಳಿದು ಬಂದಿದೆ. ಮೋದಿ ಸರ್ಕಾರ ಜಾರಿಗೆ ತರಲು ನಿರ್ಧರಿಸಿರುವ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಕಾನೂನು ವಿರುದ್ಧ ಹೋರಾಟ ಪ್ರಾರಂಭವಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಫೆಡರೇಷನ್ ಅಧ್ಯಕ್ಷ ಎಚ್.ಡಿ. ರೇವಪ್ಪ ತಿಳಿಸಿದ್ದಾರೆ.
ಆಗಸ್ಟ್ 7ರಂದು ಬಸ್ ಆಟೋ, ಟ್ಯಾಕ್ಸಿ ಯಾವುದೂ ದೊರೆಯುವುದಿಲ್ಲ, ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ಗಳು, ಖಾಸಗಿ ಬಸ್ಗಳ ಓಡಾಟ ಸಂಪೂರ್ಣ ಸ್ಥಗಿತಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತರಲು ಹೊರಟಿರುವ ಮೋಟಾರು ವಾಹನ ಕಾಯ್ದೆಯಲ್ಲಿ ತಿದ್ದುಪಡಿ ತರಲೇಬೇಕು ಎನ್ನುವ ಕಾನೂನು ಹೋರಾಟ ಇದಾಗಿದೆ ಎಂದು ತಿಳಿದು ಬಂದಿದೆ.(ಕೆ.ಎಸ್,ಎಸ್.ಎಚ್)