ಕರ್ನಾಟಕಪ್ರಮುಖ ಸುದ್ದಿಮೈಸೂರು

ನೈತಿಕತೆ ಇಲ್ಲದವರಿಂದ ನಾವು ಪಾಠ ಕಲಿಯಬೇಕಿಲ್ಲ : ಸಿದ್ದರಾಮಯ್ಯ ಪ್ರತಿಕ್ರಿಯೆ

ಶೀಘ್ರದಲ್ಲೇ ಇಬ್ಬರು ಸಚಿವರು ರಾಜಿನಾಮೆ ನೀಡುತ್ತಾರೆ ಎಂಬ ಬಿ.ಎಸ್. ಯಡಿಯೂರಪ್ಪ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಮೈಸೂರಿನ ಹುಲ್ಲಹಳ್ಳಿಗೆ ಭಾನುವಾರ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದರು.  ಯಡಿಯೂರಪ್ಪ ಇಬ್ಬರು ಸಚಿವರು ರಾಜೀನಾಮೆ ನೀಡುತ್ತಾರೆ ಎಂದು ಹೇಳಿದ್ದಾರೆ. ಅವರಿಗೆ ಶಾಸ್ತ್ರ ಗೊತ್ತಾ? ಶಾಸ್ತ್ರ ಹೇಳಲು ಬರುತ್ತದೆಯೇ  ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರಲ್ಲದೇ ಅವರ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ತಿಳಿಸಿದರು. ಭ್ರಷ್ಟಾಚಾರ ಮಾಡಿದವರು, ನೈತಿಕತೆ ಇಲ್ಲದವರು ಇಂತಹ ಹೇಳಿಕೆ ನೀಡುತ್ತಿರುವುದು ವಿಪರ್ಯಾಸ. ಮೊದಲು ಅವರು ಯಾರೆಂಬುದನ್ನು ಅರಿತುಕೊಂಡರೆ ಒಳ್ಳೆಯದು. ನೈತಿಕತೆ ಇಲ್ಲದವರಿಂದ ನಾವು ಪಾಠ ಹೇಳಿಸಿಕೊಳ್ಳಬೇಕಿಲ್ಲ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಸಂಪುಟ ಪುನಾರಚನೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು ಈಗಾಗಲೇ ಸಚಿವ ಸಂಪುಟ ಪುನಾರಚನೆ ಮಾಡಲಾಗಿದೆ. ಮತ್ತೆ ಸಚಿವ ಸಂಪುಟ ಪುನಾರಚನೆ ಮಾಡುವುದಿಲ್ಲ. ಈಗಿರುವ ಸಚಿವ ಸಂಪುಟ ಪರಿಣಾಮಕಾರಿಯಾಗಿದೆ. ಇದೇ ಸಚಿವ ಸಂಪುಟ ಇಟ್ಟುಕೊಂಡು ಮುಂದಿನ ಚುನಾವಣೆಯನ್ನು ಎದುರಿಸಿ ಗೆಲುವು ಸಾಧಿಸುತ್ತೇವೆ ಎಂದು ತಿಳಿಸಿದರು.

ಈ ಸಂದರ್ಭ ಕಾಂಗ್ರೆಸ್ ನ ಕೆಲವು ಮುಖಂಡರು ಮುಖ್ಯಮಂತ್ರಿಗಳ ಜೊತೆಗಿದ್ದರು.

Leave a Reply

comments

Related Articles

error: