
ಮೈಸೂರು
ಸ್ವಚ್ಛ ಭಾರತ ಅಭಿಯಾನ
ಸ್ವಚ್ಛ ಭಾರತ ಅಭಿಯಾನ ಯೋಜನೆಯಡಿ ವಿದ್ಯಾರ್ಥಿಗಳಿಗೆ ಮೈಸೂರಿನಲ್ಲಿ ಸ್ವಚ್ಛತಾ ಅಭಿಯಾನವನ್ನು ಆಯೋಜಿಸಲಾಗಿತ್ತು.
ಭಾರತ ಸರ್ಕಾರದ ದೀನದಯಾಳ ಉಪಾಧ್ಯಯ ಗ್ರಾಮೀಣ ಕೌಶಲ್ಯ ಯೋಜನೆ ವತಿಯಿಂದ ಆಯೋಜಿಸಲಾದ ಸ್ವಚ್ಛ ಭಾರತ ಅಭಿಯಾನವು ಮೈಸೂರಿನ ಬನ್ನಿಮಂಟಪದ ಬಳಿ ಇರುವ ಆರ್ಗನೈಜೇಶನ್ ಫಾರ್ ಡೆವಲಪ್ ಮೆಂಟ್ ಆಫ್ ಪೀಪಲ್ ನ(ಓಡಿಪಿ)ಟೀಮ್ ಲೀಸ್ ಸರ್ವಿಸಸ್ ಲಿಮಿಟೆಡ್ ಸಹಭಾಗಿತ್ವದಲ್ಲಿ ನಡೆಯಿತು.
ಅಭಿಯಾನದಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡು, ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡರು.