ಕರ್ನಾಟಕಪ್ರಮುಖ ಸುದ್ದಿಮೈಸೂರು

ಬರಗಾಲ ಎದುರಿಸಲು ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ : ಸಿಎಂ ಸಿದ್ದರಾಮಯ್ಯ

hura-04-web-2ಬರಗಾಲ ಎದುರಿಸಲು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು,  ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ಜನರಿಗೆ ಉದ್ಯೋಗ ಸಿಗುವಂತಾಗಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ  ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ 29 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಹುರ ಗ್ರಾಮದಲ್ಲಿ  ಶಿಲಾನ್ಯಾಸ ನೆರವೇರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ 100  ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಒಂದೂವರೆ ವರ್ಷದಲ್ಲಿ ಪೂರ್ಣಗೊಳ್ಳಲಿದೆ. ನಂಜನಗೂಡು ತಾಲ್ಲೂಕಿನ,  ಕಾಡಂಚಿನಲ್ಲಿರುವ 30 ಗ್ರಾಮಗಳ ಜನರು  ಪಕ್ಕದಲ್ಲೇ ನದಿ ಹರಿಯುತ್ತಿದ್ದರೂ ಕುಡಿಯಲು ನೀರಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ.  ಚಾಮರಾಜ ನಗರ ಮತ್ತು ಮೈಸೂರು ಜಿಲ್ಲೆಯ 100  ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಒಂದೂವರೆ ವರ್ಷದಲ್ಲಿ ಪೂರ್ಣಗೊಳ್ಳಲಿದೆ  ಎಂದು ತಿಳಿಸಿದರು.

ನಮ್ಮ ಸರ್ಕಾರ ಬಂದು ಮೂರೂವರೆ ವರ್ಷ ಆಯಿತು.  ಆದರೆ ನಮ್ಮ ಪ್ರತಿನಿಧಿಗಳು ಯಾರೂ ಈ ಮೊದಲೇ ನನ್ನ ಗಮನಕ್ಕೆ ತಂದಿರಲಿಲ್ಲ. ಈ ಮೊದಲೇ ನನ್ನ ಗಮನಕ್ಕೆ ತಂದಿದ್ದರೆ ಈಗಾಗಲೇ ಕಾಮಗಾರಿ ಮುಗಿಸಿ, ಕೆರೆಗಳಿಗೆ ನೀರು ಕೊಡುತ್ತಿದ್ದೆವು ಎಂದರು.

ರಾಜ್ಯದ ಬರ ಕುರಿತಂತೆ ಕೆಲಸ ಸಮರ್ಪಕವಾಗಿ ನಡೆಯುತ್ತಿದೆಯೇ ಎಂದು ಪರಿಶೀಲಿಸಲು ಸಚಿವ ಸಂಪುಟದ 4 ಉಪ ಸಮಿತಿಗಳನ್ನು ರಚಿಸಿದ್ದೇನೆ. ಈ ಸಮಿತಿಗಳು ಪ್ರತಿ ಜಿಲ್ಲೆಗೂ ಭೇಟಿ ನೀಡಬೇಕು ಎಂದು ಸೂಚನೆಯನ್ನೂನೀಡಿದ್ದೇನೆ. ಸಚಿವರ ತಂಡಗಳು ಈಗಾಗಲೇ ಹಲವಾರು ಜಿಲ್ಲೆಗಳಿಗೆ ಭೇಟಿ ನೀಡಿದೆ ಎಂದು ಹೇಳಿದರು.

ಭೀಕರ ಬರಗಾಲದಿಂದ ಈ ವರ್ಷ 25 ಸಾವಿರ ಕೋಟಿಯಷ್ಟು ನಷ್ಟವಾಗಿದೆ. ನಿಯಮಗಳ ಪ್ರಕಾರ 4,702 ಕೋಟಿ ರೂ. ಪರಿಹಾರ ಕೇಳಬಹುದು. ಪ್ರವಾಹದಿಂದ 386 ಕೋಟಿ ರೂ.ನಷ್ಟು ನಷ್ಟವಾಗಿದೆ. ಕೇಂದ್ರಕ್ಕೆ ಈ ಪರಿಹಾರದ ಮೊತ್ತ ಕೇಳಿದ್ದೇವೆ. ಇದಲ್ಲದೆ, ರಾಜ್ಯ ಸರ್ಕಾರದಿಂದಲೂ ಬರ ನಿರ್ವಹಣೆಗಾಗಿ ಹಣ ಬಿಡುಗಡೆ ಮಾಡಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಮಹದೇವ ಪ್ರಸಾದ್, ಜಿಲ್ಲಾಪಂಚಾಯತ್ ಅಧ್ಯಕ್ಷೆ ನಯೀಮಾ ಸುಲ್ತಾನ್, ಹಾಗೂ ಸ್ಥಳಿಯ ಶಾಸಕರು, ಸಂಸದರು ಉಪಸ್ಥಿತರಿದ್ದರು.

Leave a Reply

comments

Related Articles

error: