ಮೈಸೂರು

ಯಶಸ್ವಿಯಾಗಿ ನಡೆದ ಕೆಪಿಎಸ್ ಸಿ ಪರೀಕ್ಷೆ

ಮೈಸೂರಿನ 56 ಕೇಂದ್ರಗಳಲ್ಲಿ ಉಪನೋಂದಣಾಧಿಕಾರಿ, ಫುಡ್ ಇನ್ಸಪೆಕ್ಟರ್ ಸೇರಿದಂತೆ 22 ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಲಿಖಿತ ಪರೀಕ್ಷೆಯಲ್ಲಿ 17,222 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಮೈಸೂರಿನ ಶಾರದಾ ವಿಲಾಸ ಕಾಲೇಜು, ವಿದ್ಯಾವರ್ಧಕ ಕಾಲೇಜು ಸೇರಿದಂತೆ ಒಟ್ಟು 56ಕೇಂದ್ರಗಳಲ್ಲಿ ನಡೆದ ಪರೀಕ್ಷೆಯಲ್ಲಿ 24,069 ಪರೀಕ್ಷಾರ್ಥಿಗಳು ಪಾಲ್ಗೊಳ್ಳಬೇಕಿತ್ತು. ಆದರೆ ಮೊದಲ ಪೇಪರ್ ನಲ್ಲಿ 6, 847 ಅಭ್ಯರ್ಥಿಗಳು ಗೈರು ಹಾಜರಾಗಿದ್ದು, 17,222 ಅಭ್ಯರ್ಥಿಗಳು ಪರೀಕ್ಷೆ ಬರೆದರು. ಎರಡನೇ ಪೇಪರ್ ನಲ್ಲಿ 24,070 ಅಭ್ಯರ್ಥಿಗಳು ಹಾಜರಾಗಬೇಕಿತ್ತು. ಆದರೆ 17,060 ಪರೀಕ್ಷಾರ್ಥಿಗಳು ಪರೀಕ್ಷೆ ಬರೆದರು. 7010 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿರಲಿಲ್ಲ.

56 ಕೇಂದ್ರಗಳಲ್ಲಿಯೂ ಬಿಗಿ ಭದ್ರತೆಯನ್ನು ಒದಗಿಸಲಾಗಿದ್ದು, ಅಕ್ರಮ ತಡೆಯುವುದನ್ನು ತಪ್ಪಿಸಲು ಸಿಟ್ಟಿಂಗ್ ಸ್ಕ್ವಾಡ್, ಸಂಚಾರಿ ಸ್ಕ್ವಾಡ್ ತಂಡವನ್ನು ರಚಿಸಲಾಗಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷಾ ಕೇಂದ್ರದ ಬಳಿ ಇರುವ ಜೆ಼ರಾಕ್ಸ್ ಅಂಗಡಿಗಳನ್ನು ಮುಚ್ಚಿಸಲಾಗಿತ್ತು. ಜಿಲ್ಲಾಧಿಕಾರಿ ಡಿ.ರಂದೀಪ್, ಅಪರ ಜಿಲ್ಲಾಧಿಕಾರಿ ವೆಂಕಟೇಶ್ ನೇತೃತ್ವದಲ್ಲಿ, ಕರ್ನಾಟಕ ಲೋಕಸೇವಾ ಆಯೋಗದ ಮೈಸೂರು ಪ್ರಾದೇಶಿಕ ಕಚೇರಿಯ ಸಹಾಯಕ ಕಾರ್ಯದರ್ಶಿ ಎಂ.ಲಕ್ಷ್ಮಿದೇವಿ ಉಸ್ತುವಾರಿಯಲ್ಲಿ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ.

Leave a Reply

comments

Related Articles

error: