ಸುದ್ದಿ ಸಂಕ್ಷಿಪ್ತ

ಪ್ರವಾಸ ಕಾರ್ಯಕ್ರಮ

ಮೈಸೂರು,ಆ.1-ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವರಾದ ಆರ್. ಶಂಕರ್ ಅವರು ಆ.2 ಹಾಗೂ 3 ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಆ.2ರಂದು ರಾತ್ರಿ 9 ಗಂಟೆಗೆ ಮೈಸೂರು ನಗರಕ್ಕೆ ಆಗಮಿಸಿ ಸರ್ಕಾರಿ ವಸತಿ ಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಆ.3 ರಂದು ಬೆಳಿಗ್ಗೆ 10 ಗಂಟೆಗೆ ಚಾಮುಂಡಿಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿ ದರ್ಶನ ಪಡೆಯಲಿದ್ದಾರೆ. ಮಧ್ಯಾಹ್ನ 1-30ಕ್ಕೆ ಹೆಚ್.ಡಿ.ಕೋಟೆ ತಾಲ್ಲೂಕಿನ ಭೀಮನಹಳ್ಳಿಯಲ್ಲಿ ಮಾಸ್ತಿಗುಡಿ ಗಿರಿಜನ ಪುನರ್ವಸತಿ ಕೇಂದ್ರದ ಉದ್ಘಾಟನೆ ನೆರವೇರಿಸಿದ ನಂತರ ಆದಿವಾಸಿಗಳು ವಾಸಿಸುವ ಹಾಡಿಯಲ್ಲಿ ಆದಿವಾಸಿ ಜನರೊಂದಿಗೆ ಸಾಮೂಹಿಕ ಭೋಜನ ಮಾಡಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಕಬಿನಿ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ವಾಸವಾಗಿರುವ ಆದಿವಾಸಿಗಳಿಗೆ ಪುನರ್ವಸತಿ ಕಲ್ಪಿಸಲು ನಿರ್ಮಿಸಿರುವ ವಸತಿಗಳ ಉದ್ಘಾಟನೆ ಹಾಗೂ ಆದಿವಾಸಿಗಳ ಹಾಡಿಗೆ ಭೇಟಿ ಅವರ ಅಹವಾಲು ಸ್ವೀಕರಣೆ ಮತ್ತು ಅವರ ಸಮಸ್ಯೆಗಳ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಭೀಮನಹಳ್ಳಿಯಲ್ಲಿರುವ ಮಾಸ್ತಿಗುಡಿ ಗಿರಿಜನ ಪುನರ್ವಸತಿ ಕೇಂದ್ರದಲ್ಲಿ ಚರ್ಚೆ ನಡೆಸಿದ ನಂತರ ಹೆಚ್.ಡಿ.ಕೋಟೆ ತಾಲ್ಲೂಕಿನ ಖಾರಾಪುರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. (ಎಂ.ಎನ್)

Leave a Reply

comments

Related Articles

error: