
ಕರ್ನಾಟಕ
ಜಲಪಾತಕ್ಕೆ ಬಿದ್ದು ವಿದ್ಯಾರ್ಥಿ ನಾಪತ್ತೆ
ಮುಂಡಗೋಡ,ಆ.2-ಯಲ್ಲಾಪುರ ಸಾತೋಡ್ಡಿ ಫಾಲ್ಸ್ (ಜಲಪಾತ) ವೀಕ್ಷಣೆ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಯೊಬ್ಬ ಕಾಲುಜಾರಿ ಪ್ರಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದಾನೆ.
ಮುಂಡಗೋಡಿನ ಗಾಂಧಿ ನಗರ ನಿವಾಸಿ, ತಾಲೂಕಿನ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಯೂಸುಫ್ ಅಲ್ಲಾವುದ್ದೀನ್ (19) ಪ್ರಪಾತಕ್ಕೆ ಬಿದ್ದು ನಾಪತ್ತೆಯಾಗಿರುವ ವಿದ್ಯಾರ್ಥಿ. ಕಾಲೇಜಿನ 14 ಸ್ನೇಹಿತರೊಂದಿಗೆ ಸಾತೋಡ್ಡಿ ಫಾಲ್ಸ್ ವೀಕ್ಷಣೆಗೆ ಬಂದಿದ್ದ. ಜಲಪಾತ ವೀಕ್ಷಣೆ ಮಾಡುತ್ತಿದ್ದ ವೇಳೆ ಯೂಸುಫ್ ಆಕಸ್ಮಿಕವಾಗಿ ಕಾಲು ಜಾರಿ ಜಲಪಾತಕ್ಕೆ ಬಿದ್ದು ನೀರಿನ ಸೆಳೆತಕ್ಕೆ ಸಿಲುಕಿ ಕಾಣೆಯಾಗಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಯೂಸುಫ್ಗಾಗಿ ತೀವ್ರ ಶೋಧ ಮುಂದುವರಿದಿದೆ. ಈ ಬಗ್ಗೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. (ಎಂ.ಎನ್)