
ಮೈಸೂರು
ನಿಂತಿದ್ದ ಲಾರಿಗೆ ಗುದ್ದಿದ ಬೈಕ್ : ಸವಾರ ಸಾವು
ನಿಂತಿದ್ದ ಲಾರಿಗೆ ಬೈಕ್ ಸವಾರನೋರ್ವ ಹಿಂಬದಿಯಿಂದ ಗುದ್ದಿದ ಪರಿಣಾಮ ನೆಲಕ್ಕುರುಳಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಹೊಸಹುಂಡಿ ನಿವಾಸಿ ರವಿಕುಮಾರ(28) ಎಂದು ಗುರುತಿಸಲಾಗಿದೆ. ಈತ ಭಾನುವಾರ ರಾತ್ರಿ 12.30ರ ಸುಮಾರಿಗೆ ಕೂಲಿ ಕೆಲಸ ಮುಗಿಸಿ ಬರುವಾಗ ಉತ್ತನಹಳ್ಳಿ ವೃತ್ತದ ಬಳಿ ನಿಂತಿದ್ದ ಲಾರಿಯೊಂದಕ್ಕೆ ಹಿಂದಿನಿಂದ ಗುದ್ದಿದ ಪರಿಣಾಮ ತಕ್ಷಣ ನೆಲಕ್ಕುರುಳಿ ಅಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಮೃತದೇಹವನ್ನು ಕೆ.ಆರ್.ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.
ಮೈಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.