ಕರ್ನಾಟಕಪ್ರಮುಖ ಸುದ್ದಿ

ವಿದ್ಯುತ್ ಸೋರಿಕೆ ತಡೆಯಲು ಶ್ರಮಿಸಿ : ಅಧಿಕಾರಿಗಳಿಗೆ ಸಿಎಂ ತಾಕೀತು

ಬೆಂಗಳೂರು (ಆ.2): ರಾಜ್ಯದಲ್ಲಿ ವಿದ್ಯುತ್ ಸೋರಿಕೆ ಪ್ರಮಾಣವನ್ನು ಶೇ.50ರಷ್ಟು ಕಡಿಮೆ ಮಾಡಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಾಕೀತು ಮಾಡಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಇಂಧನ ಇಲಾಖೆ ಪರಿಶೀಲನಾ ಸಭೆಯಲ್ಲಿ ವಿದ್ಯುತ್ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಕಟ್ಟುನಿಟ್ಟಿನ ಸೂಚನೆ ನೀಡಿದರು.

ವಿದ್ಯುತ್ ಪೂರೈಕೆ ಹಾಗೂ ವಿತರಣಾ ನಷ್ಟವನ್ನು ಕೂಡ ತಗ್ಗಿಸಬೇಕು. ಮಾರ್ಗ ಬದಲಾವಣೆ ಸೇರಿದಂತೆ ಯಾವುದೇ ಅಡೆತಡೆಗಳಿದ್ದರೂ ಕೂಡ ನಿವಾರಣೆ ಮಾಡಿ ವಿದ್ಯುತ್ ಸೋರಿಕೆ ಪ್ರಮಾಣವನ್ನು ಶೇ.50ರಷ್ಟು ಕಡಿಮೆ ಮಾಡಲೇಬೇಕೆಂದು ನಿರ್ದೇಶನ ನೀಡಿದ್ದಾರೆ. ಈ ಸಂದರ್ಭದಲ್ಲಿ ಅಧಿಕಾರಿಗಳು ಈ ಬಾರಿ ಉತ್ತಮ ಪ್ರಮಾಣದ ಮಳೆಯಾಗಿದ್ದು, ಜಲಾಶಯಗಳಲ್ಲೂ ಗಣನೀಯ ಪ್ರಮಾಣದಲ್ಲಿ ನೀರು ಸಂಗ್ರಹವಾಗಿರುವುದರಿಂದ ಲೋಡ್ ಶೆಡ್ಡಿಂಗ್ ಮಾಡುವಂತಹ ಪರಿಸ್ಥಿತಿ ಬರುವುದಿಲ್ಲ. ವಿದ್ಯುತ್ ಉತ್ಪಾದನೆ ಪರಿಸ್ಥಿತಿಯು ತೃಪ್ತಿಕರವಾಗಿದೆ ಎಂದು ಮುಖ್ಯಮಂತ್ರಿಗಳ ಗಮನಕ್ಕೆ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ತಂದಿದ್ದಾರೆ.

ಬೆಂಗಳೂರಿನ ವಿದ್ಯುತ್ ಪರಿಸ್ಥಿತಿ ಹಾಗೂ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಶನಿವಾರ ಮತ್ತೊಂದು ಸಭೆ ನಡೆಸಲು ಸಿ.ಎಂ ತೀರ್ಮಾನಿಸಿದ್ದು, ಬಿಬಿಎಂಪಿ, ಬಿಡಿಎ, ಬಿಡಬ್ಲ್ಯೂಎಸ್‍ಎಸ್‍ಬಿ ಸೇರಿದಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳುವಂತೆ ಕುಮಾರಸ್ವಾಮಿ ಸೂಚಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. (ಎನ್.ಬಿ)

Leave a Reply

comments

Related Articles

error: