
ಕರ್ನಾಟಕ
ಪೊಲೀಸ್ ಹೆಡ್ ಕಾನ್ಸಟೇಬಲ್ ಮೇಲೆ ಹಲ್ಲೆ : ಬಂಧನ
ರಾಜ್ಯ(ಚಾಮರಾಜನಗರ)ಆ.3:- ಪೊಲೀಸ್ ಹೆಡ್ ಕಾನ್ಸಟೇಬಲ್ ಮೇಲೆಯೇ ಬೀದಿ ಬದಿ ವ್ಯಾಪಾರಿ ಹಲ್ಲೆ ನಡೆಸಿರುವ ಘಟನೆ ನಗರದಲ್ಲಿ ನಡೆದಿದ್ದು, ಯುವಕನನ್ನು ಬಂಧಿಸಲಾಗಿದೆ.
ಬಂಧಿತನನ್ನು ಮಲ್ಲೇಶ್(25) ಎಂದು ಗುರುತಿಸಲಾಗಿದ್ದು, ನಗರಸಭೆ ಮುಂಭಾಗ ಅಡ್ಡಾದಿಡ್ಡಿ ತಳ್ಳುವಗಾಡಿ ನಿಲ್ಲಿಸಿದ್ದನ್ನು ಪ್ರಶ್ನಿಸಿ ಸೂಕ್ತ ಸ್ಥಳದಲ್ಲಿ ತಳ್ಳುವ ಗಾಡಿ ನಿಲ್ಲಿಸುವಂತೆ ಸೂಚಿಸಿದ್ದಕ್ಕೆ ಏಕಾಏಕಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಈ ಕುರಿತು ಪೊಲೀಸ್ ಕಾನ್ಸಟೇಬಲ್ ಪ್ರಸನ್ನ ಪಟ್ಟಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. (ಕೆ.ಎಸ್,ಎಸ್.ಎಚ್)