ಕರ್ನಾಟಕ

ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ವಿತರಣೆ

ರಾಜ್ಯ(ಚಾಮರಾಜನಗರ) ಆ.3:- ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಶಿಸ್ತಿನಿಂದ ಮಕ್ಕಳು ಶಾಲೆಗೆ ಹೋಗಲು ಸಮವಸ್ತ್ರ, ಹಾಗೂ ಶೂ ಮತ್ತು ಸಾಕ್ಸ್ ಗಳನ್ನು ಪ್ರತಿವರ್ಷವೂ ನೀಡುತ್ತ ಬಂದಿದೆ ಎಂದು ಪಿ.ಡಬ್ಲ್ಯೂ.ಡಿ ಶಾಲೆಯ ಮುಖ್ಯ ಶಿಕ್ಷಕಿ ಸುವರ್ಣಕುಮಾರಿ ತಿಳಿಸಿದರು.

ನಗರದ ಪಿ.ಡಬ್ಲ್ಯೂ.ಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶೂ ಮತ್ತು ಸಾಕ್ಸ್ ವಿತರಣೆ ಸರಳ ಸಮಾರಂಭದಲ್ಲಿ ಮಾತನಾಡಿ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಉತ್ತಮ ಓದಿಗಾಗಿ ವಿದ್ಯಾರ್ಥಿ ವೇತನ, ಪುಸ್ತಕ,ಸೇರಿದಂತೆ ಹಲವು ಸೌಲಭ್ಯಗಳನ್ನು ನೀಡುತ್ತ ಬಂದಿದೆ. ಈ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ಉತ್ತಮ ವಿದ್ಯಾರ್ಥಿಗಳಾಗಬೇಕು ಎಂದು ತಿಳಿಸಿದರು

ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೂ ಶೂ ಮತ್ತು ಸಾಕ್ಸ್ ನ್ನು ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷೆ ರಾಜಮ್ಮ ವಿತರಿಸಿದರು. ತಾಲೂಕು ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ಎನ್.ಜೋಸೆಫ್, ಸಹ ಶಿಕ್ಷಕರಾದ ರವಿಕುಮಾರ್, ರೂಪ, ಸೋಮಣ್ಣ, ನಾಗಮ್ಮ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: