ಪ್ರಮುಖ ಸುದ್ದಿ

ಬಂಡೀಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಇರುವ ನಿರ್ಬಂಧ ಮುಂದುವರಿಯಲಿದೆ : ಸಿಎಂ ಹೆಚ್ ಡಿಕೆ ಸ್ಪಷ್ಟನೆ

ರಾಜ್ಯ(ಬೆಂಗಳೂರು), ಆ.4:- ಬಂಡೀಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಇರುವ ನಿರ್ಬಂಧ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ನಿಲುವನ್ನು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಇದಲ್ಲದೆ ಎಲಿವೆಟೆಡ್ ರಸ್ತೆ ನಿರ್ಮಾಣ ಕಾರ್ಯಸಾಧುವಲ್ಲ (not feasible)  ಎಂದು ತೀರ್ಮಾನಿಸಲಾಗಿದೆ ಎಂದು ಕೂಡ ಇದೇ ಸಂದರ್ಭದಲ್ಲಿ  ತಿಳಿಸಿದ್ದಾರೆ.(ಕೆ.ಎಸ್,ಎಸ್.ಎಚ್)

Leave a Reply

comments

Related Articles

error: